ಮಡಿಕೇರಿ ಜ.15 : ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 34ನೇ ವರ್ಷದ ಮಕರ ಸಂಕ್ರಾಂತಿ ಮಹೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಮಕರ ಸಂಕ್ರಾಂತಿ ಪ್ರಯುಕ್ತ ಜ.14ರ ಮುಂಜಾನೆಯಿಂದಲೇ ಗಣಪತಿ ಹೋಮ, ಪಂಚಾಮೃತ ಅಭಿಷೇಕ, ತುಪ್ಪಾಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳು ನೆರವೇರಿತು.
ನಿರ್ಮಾಲ್ಯ ವಿಸರ್ಜನೆ, ಉಷಾ ಪೂಜೆ, ಶ್ರೀ ಮುತ್ತಪ್ಪ ಮತ್ತು ಶ್ರೀ ಸುಬ್ರಹ್ಮಣ್ಯ ದೇವರ ಪೂಜೆ, ಪಂಚಾಮೃತ ಅಭಿಷೇಕ, ತುಪ್ಪಾಭಿಷೇಕ, ಕ್ಷೀರಾಭಿಷೇಕ, ಭಸ್ಮಾಭಿಷೇಕ, ಎಳನೀರು ಅಭಿಷೇಕ, ಪುಷ್ಪಾರ್ಚನೆ, ಶ್ರೀ ಕುಟ್ಟಿಚಾತನ್ ದೇವರ ವೆಳ್ಳಾಟಂ, ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ, ಶ್ರೀ ಗುಳಿಗ ದೇವರ ವೆಳ್ಳಾಟಂ, ಶ್ರೀ ಅಯ್ಯಪ್ಪನ ಅಲಂಕಾರ ಪೂಜೆ, ದೀಪಾರಾಧನೆ ಜರುಗಿತು
ಶ್ರೀ ಅಯ್ಯಪ್ಪ ದೇವರ ಉತ್ಸವ ಮೂರ್ತಿಯ ಕ್ಷೇತ್ರ ಪ್ರದಕ್ಷಿಣೆ ನಂತರ ಮಹಾಮಂಗಳಾರತಿ ಮತ್ತು ಪ್ರಸಾದ ವಿತರಣೆ ಹಾಗೂ ಅನ್ನದಾನ ನಡೆಯಿತು.
ನಗರದ ವಿವಿಧ ಬಡಾವಣೆಗಳಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.