ಮಡಿಕೇರಿ ಜ.16 : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ತನ್ನ 2024 ನೇ ಜನವರಿ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಾತಿಗೆ ಈಗಾಗಲೇ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕೇಂದ್ರದ ಪ್ರಾದೇಶಿಕ ಅಧಿಕಾರಿಯಾದ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ .
ಮುಕ್ತ ವಿಶ್ವವಿದ್ಯಾಲಯವು ನಿಮ್ಮ ಮನೆಯೇ ನಿರಂತರ ಪಾಠಶಾಲೆ ಎಂಬ ಧ್ಯೆಯವಾಕ್ಯದೊಂದಿಗೆ ಯು ,ಜಿ .ಸಿ ಅನುಮೋದಿತ ಶಿಕ್ಷಣ ಕ್ರಮಗಳ ಅಧ್ಯಯನದ ಅವಕಾಶವನ್ನು ವಿದ್ಯಾರ್ಥಿಗಳಿಗೆ ಈಗಾಗಲೇ ಹಲವು ವರ್ಷಗಳಿಂದ ನೀಡುತ್ತಾ ಬಂದಿದೆ .
ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯವು ರಾಜ್ಯದಲ್ಲಿ ಮುಕ್ತ ಶಿಕ್ಷಣ ನೀಡುವ ಏಕೈಕ ವಿದ್ಯಾಲಯವಾಗಿದೆ .
ಸ್ನಾತಕ ಶಿಕ್ಷಣ ಕಾರ್ಯಕ್ರಮಗಳ ಅಡಿಯಲ್ಲಿ ಬರುವ ಎಲ್ಲ ಡಿಗ್ರಿ ಪ್ರವೇಶಾತಿಗೆ ಪಿ.ಯು.ಸಿ. ಮಾರ್ಕ್ಸ್ ಕಾರ್ಡ್ ,ಡಿಪ್ಲೋಮ ಕೋರ್ಸಗಳಿಗೆ ಹತ್ತನೆಯ ತರಗತಿಯ ಅಂಕ ಪಟ್ಟಿ ಹಾಗೂ ಸ್ನಾತಕೋತ್ತರ ಪಿ .ಜಿ . ಕೋರ್ಸ್ ಗಳಿಗೆ ಡಿಗ್ರಿ ಸರ್ಟಿಫಿಕೇಟ್ ಕಡ್ಡಾಯವಾಗಿರುತ್ತದೆ.
ಜೊತೆಯಲ್ಲಿ (ಟಿ .ಸಿ )ವರ್ಗಾವಣೆ ಪ್ರಮಾಣ ಪತ್ರ , ಆದರ್ ಕಾರ್ಡ್ , ಮೂರು ಫೋಟೋಗಳು , ಪಾವತಿಗೆ ಎ .ಟಿ .ಎಂ .ಕಾರ್ಡ್ ಬ್ಯಾಂಕ್ ವಿವರಗಳು ಕಡ್ಡಾಯವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಮಡಿಕೇರಿ ಜೂನಿಯರ್ ಕಾಲೇಜು ಆವರಣದಲ್ಲಿರುವ ಭವನದಲ್ಲಿರುವ ಪ್ರಾದೇಶಿಕ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ . ಕಚೇರಿಯ ಕೆಲಸದ ಸಮಯದಲ್ಲಿ ಈ ಕೆಳಗಿನ ದೂರವಾಣಿಯ ಮುಖಾಂತರ ವಿವರ ಪಡೆಯಬಹುದಾಗಿದೆ 803342310, 9141938803.
Breaking News
- *ಬಾಳುಗೋಡುವಿನಲ್ಲಿ ಸಂಭ್ರಮದ ಕೊಡವ ನಮ್ಮೆ : ಕೊಡವ ಸಂಸ್ಕೃತಿ, ಪರಂಪರೆಗಳ ಉಳಿವಿಗೆ ಶ್ರಮಿಸಿ : ಶಾಸಕ ಎ.ಎಸ್.ಪೊನ್ನಣ್ಣ*
- *ವಿರಾಜಪೇಟೆಯಲ್ಲಿ ಶಾಸಕರಿಂದ ಕೃಷಿ ಯಂತ್ರೋಪಕರಣ ವಿತರಣೆ*
- *ಮಡಿಕೇರಿ : ನ್ಯುಮೋನಿಯಾ ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಅಭಿಯಾನ*
- *ಕೊಡಗು : ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
- *ಕೊಡಗು : ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚನೆ*
- *ಮಡಿಕೇರಿಯ ಹೃದಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣ ಮಾರಾಟಕ್ಕಿದೆ*
- *ನ.30 ರಂದು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕೊಡಗು ಜಿಲ್ಲಾ ಪ್ರವಾಸ*
- *ಜಾರ್ಖಂಡ್ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ*
- *ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು*
- *TO LET / ಬಾಡಿಗೆಗೆ*