ಬೆಂಗಳೂರು ಜ 16: ಕರ್ನಾಟಕ ನಾಮಕರಣಗೊಂಡು, ಏಕೀಕರಣದ 50 ವರ್ಷದ ನೆನಪಿಗಾಗಿ ಸುವರ್ಣ ಪೊಲೀಸ್ ಭವನ ಕಟ್ಟಡ ನಿರ್ಮಾಣಕ್ಕೆ ಬಜೆಟ್ ನಲ್ಲಿ ಹಣ ನೀಡಲಾಗುವುದು. ಖಾಲಿ ಇರುವ ಪೊಲೀಸ್ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದರು.
ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು. ಹಾಗೆ ಮಾಡಬೇಡಿ. ನಮ್ಮದು ಜಾತ್ಯತೀತ ರಾಷ್ಟ್ರ. ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು ಎಂದು ಹೇಳಿದರು.
ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ ಸಾಧ್ಯವಿದೆ ಎಂದರು.
ಗೃಹ ಸಚಿವ ಜಿ.ಪರಮೇಶ್ವರ್, ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು ನಸೀರ್ ಅಹಮದ್ ಉಪಸ್ಥಿತರಿದ್ದರು.