ಪುತ್ತೂರು ಜ.16 : ಇಂದ್ರಿಯಗಳು ಕೇಳಿದ್ದನ್ನು ಕೇಳಿದ ಹಾಗೆ ಕೊಟ್ಟರೆ ಅವು ನಮ್ಮನ್ನು ದಾರಿ ತಪ್ಪಿಸುತ್ತವೆ. ಮನಸ್ಸಿನ ಮಟ್ಟಕ್ಕೆ ಬುದ್ದಿಯನ್ನು ತರಬಾರದು ಬದಲಿಗೆ ಮನಸ್ಸನ್ನು ಬುದ್ದಿಯ ಮಟ್ಟಕ್ಕೆ ಏರಿಸಬೇಕು ಎಂದು ವಿಶ್ವಹಿಂದೂ ಪರಿಷದ್‌ನ ಜಿಲ್ಲಾ ಸತ್ಸಂಗ ಪ್ರಮುಖ ಹಾಗೂ ಸಂಸ್ಕಾರ ಭಾರತಿಯ ಜಿಲ್ಲಾ ಸಂಯೋಜಕ ಕಶೆಕೋಡಿ ಸೂರ್ಯನಾರಾಯಣ ಭಟ್ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಗ್ರಾಮ ವಿಕಾಸ ಯೋಜನಾ ಘಟಕದ ಆಶ್ರಯದಲ್ಲಿ ಕಾಲೇಜಿನ ಶ್ರೀರಾಮ ಸಭಾ ಭವನದಲ್ಲಿ ನಡೆದ ಕುಟುಂಬ ಪ್ರಬೋಧನಾ ಕಾರ್ಯಕ್ರಮದಲ್ಲಿ ಷೋಡಶ ಸಂಸ್ಕಾರಗಳು ಎನ್ನುವ ವಿಷಯದ ಬಗ್ಗೆ ಮಾತನಾಡಿದರು. ಇಂದ್ರಿಯಗಳನ್ನು ಹಿಡಿದಿಟ್ಟುಕೊಳ್ಳುವುದು ಕ್ಲಿಷ್ಟಕರ ಕೆಲಸ ಆದರೆ ಸಾಧನೆಯ ಹಾದಿಯಲ್ಲಿ ಇಂದ್ರಿಯ ನಿಗ್ರಹ ಎನ್ನುವ ಇಚ್ಚಾ ಶಕ್ತಿಯನ್ನು ಬೆಳೆಸಿಕೊಳ್ಳಲೇಬೇಕು ಎಂದರು. ವಿವಿಧ ಸಂಸ್ಕಾರಗಳ ಚೌಕಟ್ಟಿನಲ್ಲಿ ಜೀವಿತವನ್ನು ಕಟ್ಟಿಕೊಂಡಾಗ ನಾವು ಔನ್ನತ್ಯವನ್ನು ಪ್ರಾಪ್ತಿಸಿಕೊಳ್ಳಬಹುದು ಎಂದರು.
ಸಮಾರAಭದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿ ಅಚ್ಯುತ ನಾಯಕ್ ಮಾತನಾಡಿ ಆಧುನಿಕತೆಯ ನೆಪದಲ್ಲಿ ನಾವು ನಮ್ಮ ಸಂಸ್ಕಾರಗಳನ್ನು ಮರೆತು ಸ್ವಚ್ಚಂದವಾಗಿ ಜೀವಿಸುವುದಕ್ಕೆ ಪ್ರಾರಂಭಿಸಿದೆವು, ಅದರ ಫಲ ಈಗ ಗೋಚರಕ್ಕೆ ಬರುತ್ತಿದೆ. ಸನಾತನ ಸಂಸ್ಕೃತಿಯ ಜತೆಯಲ್ಲಿ ರಾಷ್ಟ್ರಪ್ರೇಮವನ್ನು ಬೆಳೆಸಿಕೊಳ್ಳಬೇಕು ಎಂದರು. ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾಮ ವಿಕಾಸ ಯೋಜನಾ ಘಟಕದ ಸಂಯೋಜಕಿ ಡಾ.ಸೌಮ್ಯ.ಎನ್.ಜೆ ಸ್ವಾಗತಿಸಿ, ಕಾರ್ಯಕ್ರಮ ಸಂಯೋಜಕಿ ಪ್ರೊ.ಪ್ರಭಾ.ಜಿ.ಎಸ್ ವಂದಿಸಿದರು. ಅಪೇಕ್ಷಾ ಕಾರ್ಯಕ್ರಮ ನಿರ್ವಹಿಸಿದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*