ಬೆಂಗಳೂರು ಜ.16 : ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾನೂನು, ಮಾನವ ಹಕ್ಕುಗಳ ಮಾಹಿತಿ ಹಕ್ಕು ವಿಭಾಗದಿಂದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಅಭಿನಂದಿಸಲಾಯಿತು.
ವಿಧಾನಸೌಧದಲ್ಲಿ ಭೇಟಿಯಾಗಿದ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ರಾಜ್ಯ ವಕೀಲರ ರಕ್ಷಣಾ ಕಾಯಿದೆಯನ್ನು ಸದನದಲ್ಲಿ ಅಂಗೀಕಾರವಾಗಿದ್ದಕ್ಕಾಗಿ ಎ.ಎಸ್.ಪೊನ್ನಣ್ಣ ಅವರನ್ನು ಅಭಿನಂದಿಸಿ, ವಿವಿಧ ಬೇಡಿಕೆಯ ಮನವಿಯನ್ನು ಸಲ್ಲಿಸಿದರು.