ಮಡಿಕೇರಿ ಜ.15 : ಮಡಿಕೇರಿ ತಾಲ್ಲೂಕಿನ ಅರೆಕಾಡು, ಹೊಸ್ಕೇರಿ, ಅಭ್ಯತ್ ಮಂಗಲ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ವಾಹನ ಸಂಚಾರ ಅಸಾಧ್ಯವಾಗಿದೆ. ಆದ್ದರಿಂದ ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಕೊಡವ ವೆಲ್‍ಫೇರ್ ಆ್ಯಂಡ್ ರಿಕ್ರಿಯೇಷನ್ ಅಸೋಸಿಯೇಷನ್ ಲೋಕೋಪಯೋಗಿ ಇಲಾಖೆಗೆ ಮನವಿ ಪತ್ರ ಸಲ್ಲಿಸಿದೆ.
ರಸ್ತೆ ಅವ್ಯವಸ್ಥೆಯಿಂದ ವಾಹನಗಳು ಮತ್ತು ಪಾದಾಚಾರಿಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಈ ಹಿಂದೆ ಕೂಡ ರಸ್ತೆ ಅವ್ಯವಸ್ಥೆ ಕುರಿತು ಶಾಸಕರ ಗಮನ ಸೆಳೆಯಲಾಗಿತ್ತು. ಅಲ್ಲದೆ ಶಾಸಕರು ಸ್ಥಳ ಪರಿಶೀಲನೆ ಮಾಡಿ ರಸ್ತೆ ಅಭಿವೃದ್ಧಿಯ ಬಗ್ಗೆ ಭರವಸೆ ನೀಡಿದ್ದರು. ಆದರೆ ಇಲ್ಲಿಯವರೆಗೆ ರಸ್ತೆ ಅಭಿವೃದ್ಧಿಯನ್ನು ಕಂಡಿಲ್ಲ, ಬದಲಿಗೆ ಮತ್ತಷ್ಟು ಹದಗೆಟ್ಟಿದೆ. ದ್ವಿಚಕ್ರ ವಾಹನಗಳು ಹಾಗೂ ಪಾದಾಚಾರಿಗಳು ನಿಯಂತ್ರಣ ತಪ್ಪಿ ಬೀಳುತ್ತಿರುವ ಘಟನೆಗಳು ನಡೆದಿದೆ. ಅನೇಕರು ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ, ಪ್ರಸ್ತುತ ಜೀವಕ್ಕೇ ಹಾನಿಯಾಗುವ ಪರಿಸ್ಥಿತಿ ಉದ್ಭವಿಸಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಕುಕ್ಕೇರ ಬಿ.ಜಯ ಚಿಣ್ಣಪ್ಪ ಆತಂಕ ವ್ಯಕ್ತಪಡಿಸಿದರು.
ರಸ್ತೆ ಅವ್ಯವಸ್ಥೆ ಮತ್ತು ಇಲ್ಲಿನ ಅಪಾಯಕಾರಿ ಪರಿಸ್ಥಿತಿಯ ಬಗ್ಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದರೂ ಯಾರೂ ಕಾಳಜಿ ತೋರುತ್ತಿಲ್ಲ. ರಸ್ತೆ ಅಭಿವೃದ್ಧಿಗಾಗಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದರೂ ಇಲ್ಲಿಯವರೆಗೆ ಕಾಮಗಾರಿಯನ್ನು ಆರಂಭಿಸಿಲ್ಲ ಎಂದು ಆರೋಪಿಸಿದರು.
ಈ ರಸ್ತೆಯಲ್ಲಿರುವ ಎರಡು ಮರಗಳು ಕಾಮಗಾರಿಗೆ ಅಡ್ಡಿಯಾಗಿದೆ ಎಂದು ತಿಳಿದು ಬಂದಿದೆ. ಆದ್ದರಿಂದ ಅರಣ್ಯ ಇಲಾಖೆ ತ್ವರಿತವಾಗಿ ಮರವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಮತ್ತು ರಸ್ತೆ ಅಭಿವೃದ್ಧಿ ವಿಚಾರದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹೆಚ್ಚು ಕಾಳಜಿ ವಹಿಸಬೇಕೆಂದು ಒತ್ತಾಯಿಸಿದರು.
ಅರೆಕಾಡು, ಹೊಸ್ಕೇರಿ ಗ್ರಾಮಸ್ಥರು ಸಹಿ ಮಾಡಿರುವ ಮನವಿ ಪತ್ರವನ್ನು ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರರು ಹಾಗೂ ಸಹಾಯಕ ಅಭಿಯಂತರರಿಗೆ ಸಲ್ಲಿಸಿದರು. ಕ್ಷೇತ್ರದ ಶಾಸಕರಿಗೂ ಮನವಿ ಸಲ್ಲಿಸುವುದಾಗಿ ತಿಳಿಸಿದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*