ಮಡಿಕೇರಿ ಜ.16 : NEWS DESK ಕೊಡಗು ಜಿಲ್ಲೆಯಲ್ಲಿ 2023-24ನೇ ಸಾಲಿನ ಜನವರಿ ಮೊದಲ ವಾರದಿಂದ ಸುರಿದ ಅಕಾಲಿಕ ಮಳೆಯಿಂದಾಗಿ ಉಂಟಾಗಿರುವ ಬೆಳೆಹಾನಿಯ ಸಮೀಕ್ಷೆಗೆ ಜಿಲ್ಲಾಡಳಿತ ಅಧಿಕಾರಿಗಳ ತಂಡವನ್ನು ರಚಿಸಿದೆ.
ಅಕಾಲಿಕ ಮಳೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ ಜಿಲ್ಲೆಯಲ್ಲಿ ಶೇ.33 ಕ್ಕಿಂತ ಅಧಿಕ ಬೆಳೆಹಾನಿಯಾಗಿರುವ ಪ್ರಕರಣಗಳನ್ನು ಅಂದಾಜಿಸುವ ಸಂಬಂಧ ಅಧಿಕಾರಿಗಳನ್ನು ನಿಯೋಜಿಸಿ ಜಿಲ್ಲಾಧಿಕಾರಿ ವೆಂಕಟರಾಜ ಅವರು ಆದೇಶಿಸಿದ್ದಾರೆ.NEWS DESK
ಕೃಷಿ ಇಲಾಖೆಯ ಕೊಡಗು ಜಿಲ್ಲಾ ಜಂಟಿ ನಿರ್ದೇಶಕರು, ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರು, ಕಾಫಿ ಮಂಡಳಿಯ ಉಪ ನಿರ್ದೇಶಕರು ಹಾಗೂ ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ, ಕುಶಾಲನಗರ ಹಾಗೂ ಪೊನ್ನಂಪೇಟೆ ತಾಲ್ಲೂಕುಗಳ ತಹಶೀಲ್ದಾರರು ಸಮೀಕ್ಷೆಯ ತಂಡದಲ್ಲಿರಲಿದ್ದಾರೆ. ಉಪವಿಭಾಗಾಧಿಕಾರಿಗಳು ಅಧಿಕಾರಿಗಳ ತಂಡದ ಮೇಲುಸ್ತುವಾರಿಯನ್ನು ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.NEWS DESK
ಶೇ.33ಕ್ಕಿಂತ ಅಧಿಕ ಬೆಳೆಹಾನಿಯಾದ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸ್ಥಳ ಪರಿಶೀಲನೆ ನಡೆಸಿ ಛಾಯಾಚಿತ್ರದೊಂದಿಗೆ 2024 ಜ.25 ರೊಳಗಾಗಿ ಖಚಿತ ವರದಿಯನ್ನು ಸಲ್ಲಿಸಬೇಕು. ತಾಲ್ಲೂಕುವಾರು ತಂಡಗಳನ್ನು ಕಾಫಿ ಮಂಡಳಿ, ಕೃಷಿ, ತೋಟಗಾರಿಕಾ ಇಲಾಖೆಗಳ ಸಹಯೋಗದೊಂದಿಗೆ ರಚಿಸಿಕೊಂಡು ತಯಾರಿಸಿದ ವರದಿಯನ್ನು ಕ್ರೋಢೀಕರಿಸಿ ಸಂಬಂಧಿಸಿದ ತಹಶೀಲ್ದಾರರು ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ.NEWS DESK










