ಮಡಿಕೇರಿ ಜ.17 : ಜಿಲ್ಲಾ ಕ್ರೀಡಾಂಗಣದಲ್ಲಿರುವ ಕಿರಿಯರ ಕ್ರೀಡಾ ವಸತಿ ನಿಲಯಕ್ಕೆ ಅಥ್ಲೆಟಿಕ್ಸ್ ಮತ್ತು ಹಾಕಿ ಕ್ರೀಡೆಯಲ್ಲಿ 2024-25ನೇ ಸಾಲಿಗೆ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆಯು ಫೆ.5 ರಂದು ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿಗೆ ಸಂಬಂಧಿಸಿದಂತೆ ಪೊನ್ನಂಪೇಟೆ ತಾಲ್ಲೂಕು ಮಿನಿ ಕ್ರೀಡಾಂಗಣದಲ್ಲಿ, ಫೆ.6 ರಂದು ಮಡಿಕೇರಿ ತಾಲ್ಲೂಕಿಗೆ ಸಂಬಂಧಿಸಿದಂತೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಣಗದಲ್ಲಿ ಹಾಗೂ ಫೆ.7 ರಂದು ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕುಗಳಿಗೆ ಸಂಬಂಧಿಸಿದಂತೆ ಕೂಡಿಗೆ ಸರ್ಕಾರಿ ಕ್ರೀಡಾ ಶಾಲೆಯಲ್ಲಿ ನಡೆಯಲಿದೆ.
ವಿದ್ಯಾರ್ಥಿಗಳು ಆಯಾಯ ದಿನದಂದು ಬೆಳಗ್ಗೆ 9 ಗಂಟೆಗೆ ಹೆಸರು ನೋಂದಾಯಿಸಬೇಕು. 01-06-2024 ಕ್ಕೆ 11 ವರ್ಷದೊಳಗಿರಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ.08272-220986 ಮತ್ತು 9480032712 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*