ಮಡಿಕೇರಿ 17 : ಮಾರುತಿ ಓಮ್ನಿ ಮತ್ತು ಬೊಲೆರೋ ಜೀಪು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ ಹಾಗೂ ಮಗಳು ಸಾವನ್ನಪ್ಪಿರುವ ಘಟನೆ ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯ ಆನೆಕಾಡು ಬಳಿ ಬುಧವಾರ ನಡೆದಿದೆ.
ಓಮ್ನಿ ಚಲಾಯಿಸುತ್ತಿದ್ದ ಮಾಜಿ ಯೋಧ, ಬಸವನಹಳ್ಳಿ ನಿವಾಸಿ ರಾಜೇಶ್ ದೇವಯ್ಯ (38) ಹಾಗೂ ಅವರ ಪುತ್ರಿ ಮೂರು ವರ್ಷದ ನ್ಯಾನ್ಸಿ ಬೊಳ್ಳಮ್ಮ ಮೃತ ದುರ್ದೈವಿಗಳು.
ರಾಜೇಶ್ ದೇವಯ್ಯ ಅವರು ಮೂಲತಃ ಕಾಲೂರು ಗ್ರಾಮದವರಾಗಿದ್ದು, ಪ್ರಸಕ್ತ ಕುಶಾಲನಗರ ಸಮೀಪದ ಬಸವನಹಳ್ಳಿಯಲ್ಲಿ ನೆಲೆಸಿದ್ದರು. ಮಡಿಕೇರಿಯಲ್ಲಿ ತಮ್ಮ ನಾದಿನಿಯ ಪುತ್ರಿಯ ನಾಮಕರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಓಮ್ನಿಯಲ್ಲಿ ಬಸವನಹಳ್ಳಿಗೆ ಮರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ದೇವಯ್ಯ ಹಾಗೂ ಪುತ್ರಿ ನ್ಯಾನ್ಸಿ ಬೊಳ್ಳಮ್ಮ ಪ್ರಯಾಣಿಸುತ್ತಿದ್ದ ಓಮ್ನಿಗೆ ಬೋಯಿಕೇರಿಗೆ ತೋಟದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಪಿರಿಯಪಟ್ಟಣ ತಾಲೂಕಿನ ಚನಕಲ್ ಕಾವಲ್‍ನ ಬೊಲೆರೋ ಜೀಪು ಡಿಕ್ಕಿಯಾಗಿದೆ. ಪತ್ನಿ ಸ್ಮಿತಾ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಓಮ್ನಿಯನ್ನು ಹಿಂಬಾಲಿಸುತ್ತಿದ್ದರು ಎನ್ನಲಾಗಿದೆ.
ಘಟನೆಯಲ್ಲಿ ರಾಜೇಶ್ ದೇವಯ್ಯ ಅವರು ಸ್ಥಳದಲ್ಲೇ ಮೃತಪಟ್ಟರೆ, ಪುತ್ರಿ ನ್ಯಾನ್ಸಿ ಮಡಿಕೇರಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾಳೆ. ಅಪಘಾತದ ರಭಸಕ್ಕೆ ಓಮ್ನಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಪತ್ನಿ ಸ್ಮಿತಾ ಅವರು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ.
ಬೊಲೆರೋ ಚಾಲಕ ಅರುಣ್, ಕಾರ್ಮಿಕ ಮಹಿಳೆಯರಾದ ಜಯಲಕ್ಷ್ಮಿ ಹಾಗೂ ನೀಲಮ್ಮ ಅವರುಗಳಿಗೂ ಗಂಭೀರ ಗಾಯಗಳಾಗಿದ್ದು, ಕುಶಾಲನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಶಾಲನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*