ಮಡಿಕೇರಿ ಜ.19 : ಕೊಡಗು ಗೌಡ ನಿವೃತ್ತ ನೌಕರರ ಸಂಘದ ವತಿಯಿಂದ ಅರೆಭಾಷಿಕ ಗೌಡ ಜನಾಂಗ ಬಾಂಧವರ ವಧು-ವರರ ಸಮಾವೇಶ ಫೆ.11 ರಂದು ನಡೆಯಲಿದೆ.
ಅಂದು ಬೆಳಗ್ಗೆ 9.30 ಗಂಟೆಗೆ ಮಡಿಕೇರಿಯ ಕೊಡಗು ಗೌಡ ವಿದ್ಯಾ ಸಂಘದ ಸಭಾಂಗಣದಲ್ಲಿ ಸಮಾವೇಶ ನಡೆಯಲಿದ್ದು, ಆಸಕ್ತರು ತಮ್ಮ ಭಾವಚಿತ್ರ ಮತ್ತು ಇತರ ಎಲ್ಲಾ ಮಾಹಿತಿಗಳೊಂದಿಗೆ ಖುದ್ದಾಗಿ ಭಾಗವಹಿಸಬೇಕು. ಬರುವಾಗ ಅಪೇಕ್ಷಿತ ವಧು, ವರರನ್ನು ಕರೆದುಕೊಂಡು ಬರಬೇಕೆಂದು ಸಂಘದ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗೆ ಮೊ.ಸಂ 9379213818, 9739495381, 9449476171, 9449086589 ನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.





















