ನಾಪೋಕ್ಲು ಜ.20 : NEWS DESK : ನರಿಯಂದಡ ಗ್ರಾ.ಪಂ ವ್ಯಾಪ್ತಿಯ ಚೇಲಾವರ ಗ್ರಾಮದಲ್ಲಿ ಹಾಳಾಗಿದ್ದ ಟ್ರಾನ್ಸ್ ಫಾರ್ಮರ್ ಅನ್ನು ಮೂರ್ನಾಡು ಚೆಸ್ಕಾಂ ಇಲಾಖೆ ದುರಸ್ತಿ ಪಡಿಸಿ, ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಚೇಲಾವರ ಗ್ರಾಮದ ಮನೆಯಪಂಡ ಧೀರಜ್ ತಿಮ್ಮಯ್ಯ ಅವರ ಕಾಫಿ ತೋಟದಲ್ಲಿ ಅಳವಡಿಸಲಾಗಿರುವ ಟ್ರಾನ್ಸ್ ಫಾರ್ಮರ್ ಕಳೆದ ಎರಡು ವರ್ಷಗಳಿಂದ ದುಸ್ಥಿತಿಯಲ್ಲಿದ್ದು .ಇದರಿಂದಾಗಿ ಗ್ರಾಮಕ್ಕೆ ವಿದ್ಯುತ್ ಸಮಸ್ಯೆ ಎದುರಾಗಿತ್ತು. ಪದೇ ಪದೇ ವಿದ್ಯುತ್ ಕಡಿತಗೊಳ್ಳುವುದು, ವಿದ್ಯುತ್ ಪೂರೈಕೆಯಾದರೂ ಲೋ ವೋಲ್ಟೇಜ್ ಕೊರತೆಯಿಂದ ಸಮಸ್ಯೆ ಅನುಭವಿಸುವಂತಾಗಿತ್ತು.. ನೂತನ ಟ್ರಾನ್ಸ್ ಫಾರ್ಮರ್ ಅಳವಡಿಸಿ ಗ್ರಾಮದ ವಿದ್ಯುತ್ ಸಮಸ್ಯೆಯನ್ನು ಪರಿಹರಿಸಿ ಕೊಡಬೇಕೆಂದು ಗ್ರಾಮಸ್ಥರು ಆಗ್ರಹಿದ್ದು, ಈ ಕುರಿತು ಪತ್ರಿಕೆಯಲ್ಲಿ ವರದಿ ಪ್ರಕಟವಾಗಿತ್ತು.
ವರದಿಗೆ ಸ್ಪಂದಿಸಿ ಮೂರ್ನಾಡು ಚೆಸ್ಕಾಂ ಇಲಾಖೆಯ ಜ್ಯೂನಿಯರ್ ಇಂಜಿನಿಯರ್ ತೇಜ್ ಮತ್ತು ಸಿಬ್ಬಂದಿ ಸ್ಥಳಕ್ಕೆ ತೆರಳಿ ಟ್ರಾನ್ಸ್ ಫಾರ್ಮರ್ ದುರಸ್ತಿ ಪಡಿಸಿ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ವರದಿ : ದುಗ್ಗಳ ಸದಾನಂದ








