ನಾಪೋಕ್ಲು ಜ.20 : ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಅಂಗವಾಗಿ ನಾಪೋಕ್ಲುವಿನ ಸಂತೆ ಮೈದಾನದಲ್ಲಿ ಸಾರ್ವಜನಿಕರಿಗೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿ ನೀಡಲಾಯಿತು.
ನಾಪೋಕ್ಲು ಹಾಗೂ ಹೊದ್ದೂರು ಗ್ರಾಮ ಪಂಚಾಯಿತಿಗಳಲ್ಲಿ ಯಾತ್ರೆ ನಡೆದಿದ್ದು, ಜನರಿಗೆ ಆಯುಷ್ಮಾನ್ ಭಾರತ, ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ, ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ, ದೀನ್ ದಯಾಳ್ ಅಂತ್ಯೋಧಯ ಯೋಜನೆ, ಪ್ರಧಾನಮಂತ್ರಿ ಅವಾಸ್ ಯೋಜನೆ ಗ್ರಾಮೀಣ ಪ್ರಧಾನ ಮಂತ್ರಿ ಉಜ್ವಲ ಯೋಜನೆ, ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ , ಕಿಸಾನ್ ಕ್ರೆಡಿಟ್ ಕಾರ್ಡ್ , ಪೋಷನ್ ಅಭಿಯಾನ್, ಜಲಜೀವನ್ ಮಿಷನ್, ಸ್ವಾಮಿತ್ವ ಯೋಜನೆ, ಜೀವನ್ ಜ್ಯೋತಿ ವಿಮಾ ಯೋಜನೆ, ಸುರಕ್ಷಾ ವಿಮಾ ಯೋಜನೆ ಅಟಲ್ ಪಿಂಚಣಿ ಯೋಜನೆ ಪ್ರಧಾನಮಂತ್ರಿ ಪ್ರಣಾಮ ಯೋಜನೆ ಮತ್ತು ಜ್ಞಾನ ಗೊಬ್ಬರಗಳ ಬಗ್ಗೆ ವಿವಿಧ ಇಲಾಖೆ ಹಾಗೂ ಬ್ಯಾಂಕಿನ ಅಧಿಕಾರಿಗಳು ಸಮಗ್ರ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ 5 ಅರ್ಹ ಫಲಾನುಭವಿಗಳಿಗೆ ಅಡಿಗೆ ಅನಿಲ ಸಂಪರ್ಕವನ್ನು ನೀಡಲಾಯಿತು.
ಈ ಸಂದರ್ಭ ವಿವಿಧ ಯೋಜನೆಯ ಫಲಾನುಭವಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ ಕೇಂದ್ರ ಸರಕಾರದ ಯೋಜನೆಯ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿ ಕೃತಜ್ಞತೆ ಸಲ್ಲಿಸಿದರು. ರೈತರಿಗೆ ಅನುಕೂಲವಾಗುವ ಕಿಸಾನ್ ಡ್ರೋನ್ ಪ್ರದರ್ಶನ ಗಮನ ಸೆಳೆಯಿತು. ಪ್ರದರ್ಶನ ವ್ಯಾನ್ ನಲ್ಲಿ ವಿವಿಧ ಯೋಜನೆಗಳಿಗೆ ಸಂಬಂಧಿಸಿದ ವಿಡಿಯೋಗಳನ್ನು ಪ್ರದರ್ಶಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಾರ್ವಜನಿಕರಿಗೆ ಉಚಿತವಾಗಿ ಕ್ಯಾಲೆಂಡರ್, ಮಾಹಿತಿ ಕೈಪಿಡಿಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ನಾಪೋಕ್ಲು ಗ್ರಾ.ಪಂ ಅಧ್ಯಕ್ಷರಾದ ವನಜಾಕ್ಷಿ ರೇಣುಕೇಶ್, ಉಪಾಧ್ಯಕ್ಷ ಕುಲ್ಲೆಟೀರ ಹೇಮಾ ಅರುಣ್, ಲೀಡ್ ಬ್ಯಾಂಕ್ ಜಿಲ್ಲಾ ಪ್ರಭಾರ ಅಧಿಕಾರಿ ಸಿದ್ದರಾಮಯ್ಯ, ಕಾಫಿ ಬೋರ್ಡ್ ಜಿಲ್ಲಾ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ್, ಕೆನರಾ ಬ್ಯಾಂಕ್ ವಲಯ ಮುಖ್ಯಸ್ಥ ರಾಜೇಶ್ ವಿ.ಕುಮಾರ್ , ನಬಾರ್ಡ್ ಜಿಲ್ಲಾ ಅಭಿವೃದ್ಧಿ ಅಧಿಕಾರಿ ರಮೇಶ್ ಬಾಬು, ಭಾರತ್ ಪೆಟ್ರೋಲಿಯಂ ಅಧಿಕಾರಿ ನಿತೀನ್, ಕೆವಿಕೆ ಯ ಅಧಿಕಾರಿ ಸುರೇಶ್, ಲೀಡ್ ಬ್ಯಾಂಕ್ ಜಿಲ್ಲಾ ನೋಡಲ್ ಅಧಿಕಾರಿ, ವ್ಯವಸ್ಥಾಪಕ ಗಂಗಾಧರ ನಾಯಕ್ , ಸಿಬ್ಬಂದಿಗಳು ಹಾಗೂ ಫಲಾನುಭವಿಗಳು ಹಾಜರಿದ್ದರು.
ವರದಿ : ದುಗ್ಗಳ ಸದಾನಂದ