ಮಡಿಕೇರಿ ಜ.20 : NEWS DESK : ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ದಿನವಾದ ಜ.22 ರಂದು ಕೊಡಗು ಜಿಲ್ಲೆಯ ಎಲ್ಲಾ ದೇವಾಲಯಗಳಲ್ಲಿ ಮತ್ತು ಮನೆ ಮನೆಗಳಲ್ಲಿ ವಿಶೇಷ ಪೂಜೆ ಸಲ್ಲಿಸುವಂತೆ ವಿಶ್ವ ಹಿಂದೂ ಪರಿಷತ್ ನ ಜಿಲ್ಲಾ ಘಟಕ ಕರೆ ನೀಡಿದೆ.
ಜಿಲ್ಲೆಯ ಎಲ್ಲಾ ದೇವಾಲಯಗಳನ್ನು ಶುಚಿ ಮಾಡಿ, ಅಲಂಕಾರಗೊಳಿಸಿ ಶ್ರದ್ಧಾಭಕ್ತಿಯಿಂದ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಬೇಕು. ಶ್ರೀರಾಮ ನಾಮಸ್ಮರಣೆ ಮತ್ತು ಭಜನೆಯೊಂದಿಗೆ ಬಾಲರಾಮನ ಪ್ರತಿಷ್ಠಾಪನೆಯ ದಿನವನ್ನು ಅರ್ಥಪೂರ್ಣಗೊಳಿಸಬೇಕು.
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಸೂಚನೆಯಂತೆ ಈಗಾಗಲೇ ಜಿಲ್ಲೆಯ ಪ್ರತಿ ಮನೆಗೂ ಆಯೋಧ್ಯೆಯ ಮಂತ್ರಾಕ್ಷತೆಯನ್ನು ತಲುಪಿಸಲಾಗಿದೆ. ಸೋಮವಾರ ಸೂರ್ಯಾಸ್ತವಾದ ನಂತರ ಎಲ್ಲಾ ಮನೆಯಲ್ಲಿ ದೀಪ ಬೆಳಗಿ ಮಂತ್ರಾಕ್ಷತೆಗೆ ವಿಶೇಷ ಪೂಜೆ ಸಲ್ಲಿಸಿ ದೀಪೋತ್ಸವ ಆಚರಿಸಬೇಕು ಎಂದು ವಿಹೆಚ್‍ಪಿ ಮನವಿ ಮಾಡಿದೆ.









