ಸೋಮವಾರಪೇಟೆ ಜ.20 : NEWS DESK : ಮೌಲ್ಯಾಧಾರಿತ ಶಿಕ್ಷಣವೂ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದೊಂದಿಗೆ ಅವರ ಭವಿಷ್ಯವನ್ನು ರೂಪಿಸಲು ಸಹಕಾರಿಯಾಗಲಿದೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಮಠದ ಹಾಸನ, ಕೊಡಗು ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ಶ್ರೀ ಶಂಭುನಾಥ ಸ್ವಾಮೀಜಿ ಹೇಳಿದರು.
ಹೇಳಿದರು.
ಗೌಡಳ್ಳಿ ಬಿಜಿಎಸ್ ಪಬ್ಲಿಕ್ ಶಾಲೆಯ ಕಲೋತ್ಸವ ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿ ಅವರು, ಮಾತನಾಡಿದರು.
ಮೌಲ್ಯಾಧಾರಿತ ಶಿಕ್ಷಣವೂ ಸಾಮಾಜಿಕ, ನೈತಿಕ, ಸಮಗ್ರತೆ, ಚಾರಿತ್ರ್ಯ, ಆಧ್ಯಾತ್ಮಿಕತೆಯೊಂದಿಗೆ ನಮ್ರತೆ, ಪ್ರಾಮಾಣಿಕತೆಯ ಗುಣಗಳನ್ನು ಕಲಿಸುತ್ತದೆ. ಈ ನಿಟ್ಟಿನಲ್ಲಿ ವಿದ್ಯಾಸಂಸ್ಥೆಗಳು ಮೌಲ್ಯಾಧಾರಿತ ಶಿಕ್ಷಣ ನೀಡುವತ್ತ ಯೋಜನೆ ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ವಿವೇಕ, ವಿನಯ ಮಕ್ಕಳಲ್ಲಿ ಬೆಳಸಬೇಕು. ಪೋಷಕರು ಮಕ್ಕಳನ್ನು ಜೋಪಾನ ಮಾಡಬೇಕಿದೆ. ಮೊಬೈಲ್‍ನಿಂದ ಮಕ್ಕಳಲ್ಲಿ ಕಲಿಕ ಗುಣಮಟ್ಟ ಕುಸಿಯುತ್ತದೆ ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಡಾ.ಮಂತರ್ ಗೌಡ, ಶಿಕ್ಷಣವೂ ನಿಜವಾದ ಆಸ್ತಿಯಾಗಿದ್ದು, ವಿದ್ಯೆಯನ್ನು ಕಲಿಸುವುದರ ಮೂಲಕ ಮಕ್ಕಳನ್ನೆ ಆಸ್ತಿಯನ್ನಾಗಿ ಮಾಡಿಕೊಳ್ಳಬೇಕು ಎಂದು ಹೇಳಿದರು.
ವಿದ್ಯೆ ಜ್ಞಾನವನ್ನು ನೀಡುವುದರಿಂದ ಕಲಿತ ವಿದ್ಯೆಯನ್ನು ಯಾರಿಂದಲೂ ಕದಿಯಲು ಸಾಧ್ಯವಿಲ್ಲ. ಪೋಷಕರು ಮಕ್ಕಳ ಮೇಲೆ ಶಿಕ್ಷಣದ ವಿಷಯದಲ್ಲಿ ಒತ್ತಡ ಹೇರಬಾರದು. ಈಗಿನ ಮಕ್ಕಳು ಬುದ್ದಿವಂತರಾಗಿದ್ದಾರೆ. ಅವರಿಗೆ ಇಷ್ಟವಾದ ವಿಷಯದಲ್ಲಿ ವಿದ್ಯಾಭ್ಯಾಸ ಮುಂದುವರಿಸಲು ಅವಕಾಶ ಮಾಡಿಕೊಡಬೇಕು. ಮಕ್ಕಳು ಕಲಿಯುವ ಹಂತದಲ್ಲಿ ಇನ್ನೊಬ್ಬರಿಗೆ ಹೋಲಿಕೆ ಮಾಡಬಾರದು. ಮಕ್ಕಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುವ ಮಾತುಗಳನ್ನಾಡಬೇಕು ಎಂದು ಕಿವಿಮಾತು ಹೇಳಿದರು.
ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಿದ ಶಶಿತ್‍ಗೌಡ, ಜಿ.ಆರ್.ಕೌಶಿಕ್, ಮಹಮ್ಮದ್ ಶಪನ್, ಎಚ್.ಸಂಜಯ್ ಅವರುಗಳನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಚ್.ಎಲ್.ಮಲ್ಲೇಶಗೌಡ, ಗೌಡಳ್ಳಿ ಗ್ರಾ.ಪಂ ಅಧ್ಯಕ್ಷ ಎ.ಎಸ್.ನವೀನ್ ಕುಮಾರ್, ಗೌಡಳ್ಳಿ ಸಹಕಾರ ಸಂಘದ ಅಧ್ಯಕ್ಷ ಹೆಚ್.ಆರ್.ಸುರೇಶ್, ಆಡಳಿತ ಮಂಡಳಿ ನಿರ್ದೇಶಕರಾದ ಹೆಚ್.ಆರ್.ಮುತ್ತಣ್ಣ, ಜಿ.ಎಂ.ಹೂವಯ್ಯ, ವಿ.ಎನ್.ನಾಗರಾಜ್, ವೀರಭದ್ರಪ್ಪ, ಎಚ್.ಈ.ಪುಟ್ಟಸ್ವಾಮಿ, ಪ್ರಮುಖರಾದ ಕೆ.ಟಿ.ಕೃಷ್ಣೇಗೌಡ, ಮುಖ್ಯಶಿಕ್ಷಕಿ ರತ್ನಮ್ಮ ಇದ್ದರು.
ಕ್ರೀಡಾಕೂಟದ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
Breaking News
- *ಬಾಳುಗೋಡುವಿನಲ್ಲಿ ಸಂಭ್ರಮದ ಕೊಡವ ನಮ್ಮೆ : ಕೊಡವ ಸಂಸ್ಕೃತಿ, ಪರಂಪರೆಗಳ ಉಳಿವಿಗೆ ಶ್ರಮಿಸಿ : ಶಾಸಕ ಎ.ಎಸ್.ಪೊನ್ನಣ್ಣ*
- *ವಿರಾಜಪೇಟೆಯಲ್ಲಿ ಶಾಸಕರಿಂದ ಕೃಷಿ ಯಂತ್ರೋಪಕರಣ ವಿತರಣೆ*
- *ಮಡಿಕೇರಿ : ನ್ಯುಮೋನಿಯಾ ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಅಭಿಯಾನ*
- *ಕೊಡಗು : ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
- *ಕೊಡಗು : ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚನೆ*
- *ಮಡಿಕೇರಿಯ ಹೃದಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣ ಮಾರಾಟಕ್ಕಿದೆ*
- *ನ.30 ರಂದು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕೊಡಗು ಜಿಲ್ಲಾ ಪ್ರವಾಸ*
- *ಜಾರ್ಖಂಡ್ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ*
- *ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು*
- *TO LET / ಬಾಡಿಗೆಗೆ*