ಮಡಿಕೇರಿ ಜ.21 NEWS DESK : ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠೆ ಅಂಗವಾಗಿ ನಗರದ ಸುದರ್ಶನ ಬಡಾವಣೆಯ ಮುನೀಶ್ವರ ದೇವಾಲಯದಲ್ಲಿ ಹಲವು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 9 ಗಂಟೆಯಿಂದ ಪೂಜಾ ಕೈಂಕರ್ಯ ಆರಂಭವಾಗಲಿದೆ. 11 ಗಂಟೆಗೆ ಭಕ್ತರಿಗೆ ಪ್ರಸಾದ ವಿತರಣೆ, ಬಳಿಕ ಸಾಂಪ್ರದಾಯಿಕ ಉಡುಗೆಯಲ್ಲಿ ಮೆರವಣಿಗೆ ಮೂಲಕ ಆಂಜನೇಯ ದೇವಾಲಯಕ್ಕೆ ತೆರಳಲಾಗುವುದು. ಪ್ರಾಣ ಪ್ರತಿಷ್ಠಾಪನೆಯ ನೇರ ಪ್ರಸಾರವನ್ನು ಬೃಹತ್ ಪರದೆಯಲ್ಲಿ ಆಂಜನೇಯ ದೇವಾಲಯದಲ್ಲಿ ವೀಕ್ಷಿಸಲಾಗಯವುದೆಂದು ಮುನೀಶ್ವರ ದೇವಾಲಯ ಸಮಿತಿ ಅಧ್ಯಕ್ಷ ಬಿ.ಡಿ. ಜಗದೀಶ್ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಪರಾಹ್ನ 4 ಗಂಟೆಯಿಂದ ವಿಶೇಷ ಪೂಜೆ, ಸಂಜೆ 7 ಗಂಟೆಗೆ ಮಹಾಮಂಗಳಾರತಿ ನೆರವೇರಲಿದೆ. ರಾಮಮಂದಿರ ಕರಸೇವೆಯಲ್ಲಿ ಪಾಲ್ಗೊಂಡಿದ್ದ ಬಡಾವಣೆಯ ಕರಸೇವಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಳಿಕ ಪುಟಾಣಿ ಮಕ್ಕಳಿಗ ಛದ್ಮವೇಷ, ಭಕ್ತಿಗೀತೆ ಗಾಯನ ಸ್ಪರ್ಧೆ ಏರ್ಪಡಿಸಲಾಗಿದೆ. ರಾತ್ರಿ 8.15ಕ್ಕೆ ಅನ್ನದಾನ ನೆರವೇರಿಲಿದೆ ಎಂದು ಮಾಹಿತಿ ನೀಡಿದ್ದಾರೆ.













