ಮಡಿಕೇರಿ ಜ.21 : ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆಯ ಹಿನ್ನೆಲೆ ಕೊಡಗು ಜಿಲ್ಲೆಯ ಬಹುತೇಕ ಎಲ್ಲಾ ದೇವಾಲಯಗಳಲ್ಲಿ ಶ್ರೀರಾಮನಾಮ ಸ್ಮರಣೆ ನಡೆಯಲಿದೆ.
ಸೋಮವಾರ ಬೆಳಗ್ಗೆಯಿಂದ ರಾತ್ರಿಯವರೆಗೆ ವಿಶೇಷ ಪೂಜೆ, ಪ್ರಾರ್ಥನೆ, ಭಜನೆ ಜರುಗಲಿದ್ದು, ದೇವಾಲಯ ಸಮಿತಿಗಳು ಸಿದ್ಧತೆಗಳನ್ನು ಮಾಡಿಕೊಂಡಿವೆ. ಅಯೋಧ್ಯೆಯಿಂದ ನೇರಪ್ರಸಾರವಾಗುವ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆಯ ದೃಶ್ಯಗಳನ್ನು ದೊಡ್ಡ ಪರದೆಯ ಮೇಲೆ ತೋರಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಎಲಲಾ ದೇವಾಲಯಗಳು ಭಕ್ತರಿಗೆ ಅನ್ನಸಂತರ್ಪಣೆ ಮಾಡಲು ನಿರ್ಧರಿಸಿವೆ. ಜಿಲ್ಲೆಯ ಊರು, ಊರುಗಳು ಕೇಸರೀಮಯವಾಗಿದ್ದು, ಹಿಂದೂ ಸಂಘಟನೆಗಳು ಮತ್ತು ಬಿಜೆಪಿ ಕಾರ್ಯಕರ್ತರು ರಾಮೋತ್ಸವದ ಸಂಭ್ರಮದಲ್ಲಿದ್ದಾರೆ.
ಈಗಾಗಲೇ ವಿಶ್ವ ಹಿಂದೂ ಪರಿಷತ್ ಎಲ್ಲಾ ದೇವಾಲಯ ಹಾಗೂ ಮನೆ ಮನೆಗಳಲ್ಲಿ ರಾಮನಾಮ ಸ್ಮರಣೆ, ದೀಪೋತ್ಸವ ಮತ್ತು ವಿಶೇಷ ಪೂಜೆಗೆ ಕರೆ ನೀಡಿದೆ.












