ಮಡಿಕೇರಿ ಜ.22 NEWS DESK : ಕೊಡಗು ನೆಹರು ಯುವ ಕೇಂದ್ರದ ವತಿಯಿಂದ ನಡೆದ “ಮೈ ಭಾರತ್-ವೀಕ್ಷಿತ್ ಭಾರತ್@2047” ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಜಿಲ್ಲೆಯ ಯುವಕ ಅಬ್ದುಲ್ ರಝಕ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಸ್ಪರ್ಧೆಯ ತೀರ್ಪುಗಾರರಾಗಿ ಮಡಿಕೇರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಯೋಜನಾಧಿಕಾರಿ ಡಾ.ಪ್ರಕಾಶ್, ಮಡಿಕೇರಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ.ಕನ್ನಿಕಾ, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ಹಿಂದಿ ಭಾಷಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಖುರ್ಷಿದಾ, ನೆಹರು ಯುವ ಕೇಂದ್ರದ ಸಿಬ್ಬಂದಿಗಳಾದ ರಂಜಿತಾ, ದೀಪ್ತಿ ಕಾರ್ಯನಿರ್ವಹಿಸಿದರು.