ಬೆಂಗಳೂರು ಜ.22 NEWS DESK : ಪಿ.ಎಸ್.ಐ. ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಮ್ಮ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು.
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು ನಸೀರ್ ಅಹಮದ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.