ಮಡಿಕೇರಿ ಜ.22 NEWS DESK : ಲೋಕಸಭಾ ಚುನಾವಣೆ ಹಿನ್ನೆಲೆ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ವಿಶೇಷ ಅಭಿಯಾನ ಮೂಲಕ ಯುವ ಮತದಾರರನ್ನು ಸೇರ್ಪಡೆ ಮಾಡಲಾಗಿದೆ. ನಮೂನೆ-6, ನಮೂನೆ-7 ಮತ್ತು ನಮೂನೆ-8 ರಲ್ಲಿ ಯುವ ಮತದಾರರ ಸೇರ್ಪಡೆ ಮತ್ತಿತರ ಕಾರ್ಯಗಳನ್ನು ಬಿಎಲ್‍ಒ ಮೂಲಕ ಮನೆ ಮನೆಗೆ ತೆರಳಿ ಮತದಾರರ ಪಟ್ಟಿಯನ್ನು ತಯಾರಿಸಲಾಗಿದೆ ಎಂದರು.
ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ನಿರಂತರ ಪ್ರಕ್ರಿಯೆಯಾಗಿದ್ದು, ಯುವ ಮತದಾರರು ಹೆಸರು ಸೇರ್ಪಡೆ ಮಾಡಬಹುದಾಗಿದೆ ಎಂದರು.
ಸದ್ಯ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಸಂಬಂಧಿಸಿದಂತೆ ವೋಟರ್ ಆಪ್ ಮೂಲಕ ತಮ್ಮ ಹೆಸರು ಇರುವುದನ್ನು ಖಾತರಿಪಡಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.
ಅಂತಿಮ ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ 546 ಮತಗಟೆಗಳಿದ್ದು, ಒಟ್ಟು 4,63,414 ಮತದಾರರು ಇದ್ದಾರೆ. ಅದರಲ್ಲಿ 2,27,339 ಪುರುಷ ಮತದಾರರು, 2,36,059 ಮಹಿಳಾ ಮತದಾರರು ಇದ್ದಾರೆ. ಹಾಗೂ 16 ಮಂದಿ ಇತರ ಮತದಾರರು ಇದ್ದಾರೆ.
ವಿಧಾನಸಭಾ ಕ್ಷೇತ್ರವಾರು ಗಮನಿಸಿದಾಗ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 273 ಮತಗಟ್ಟೆಗಳಿದ್ದು, ಒಟ್ಟು 2,35,139 ಮತದಾರರು ಇದ್ದಾರೆ. ಇವರಲ್ಲಿ 1,14,580 ಪುರುಷ ಮತದಾರರು, 1,20,550 ಮಹಿಳಾ ಮತದಾರರು ಹಾಗೂ 9 ಮಂದಿ ಇತರೆ ಮತದಾರರು ಇದ್ದಾರೆ.
ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 273 ಮತಗಟ್ಟೆಗಳಿದ್ದು, ಒಟ್ಟು 2,28,275 ಮಂದಿ ಮತದಾರರು ಇದ್ದಾರೆ. ಇವರಲ್ಲಿ 1,12,759 ಪುರುಷ ಮತದಾರರು, 1,15,509 ಮಹಿಳಾ ಮತದಾರರು ಹಾಗೂ 7 ಮಂದಿ ಇತರೆ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾಹಿತಿ ನಿಡಿದರು.
22-01-2024 ರಂದು ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯನ್ನು ದಿನಾಂಕ 27-10-2023ರಂದು ಪ್ರಕಟಿಸಿದ ಕರಡು ಮತದಾರರ ಪಟ್ಟಿಗೆ ಹೊಲಿಸಿದ್ದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಿಂದ 3498 ಮತದಾರರು ನಿವ್ವಳ ಬದಲಾವಣೆ ಆಗಿದೆ ಎಂದು ತಿಳಿಸಿದರು.
ಪ್ರಸ್ತುತ ಮತದಾರರ ಪಟ್ಟಿ ನಿರಂತರ ಪರಿಷ್ಕರಣೆ ನಡೆಯುತಿದ್ದು, ಈ ಅವಧಿಯಲ್ಲಿ ಮತದಾರರ ಪಟ್ಟ್ಟಿಗೆ ಹೆಸರು ಸೇರಿಸಲು ನಮೂನೆ-6 ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಮೃತ, ಸ್ಥಳಾಂತರ, ಪುನರಾವರ್ತನೆ ಆಗಿದ್ದಲ್ಲಿ ಹೆಸರುಗಳನ್ನು ತೆಗೆಯಲು ನಮೂನೆ-7 ರಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಮತದಾರರ ಪಟ್ಟಿ ಮತ್ತು ಮತದಾರರ ಗುರುತಿನ ಚೀಟಿಯಲ್ಲಿನ ನಮೂದುಗಳು ತಪ್ಪಾಗಿದ್ದಲ್ಲಿ ತಿದ್ದುಪಡಿ ಮಾಡಲು ಹಾಗೂ ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ವರ್ಗಾವಣೆ ಮಾಡಲು ನಮೂನೆ-8 ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ-6ಎರಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದರು.
ನಮೂನೆ-6, 6ಎ, 7 ಮತ್ತು 8ರ ಅರ್ಜಿಗಳನ್ನು ಭಾರತ ಚುನಾವಣಾ ಆಯೋಗವು ಅಭಿವೃದ್ಧಿ ಪಡಿಸಿರುವ ಮೊಬೈಲ್ ಅಪ್ಲಿಕೇಷನ್ ಮತದಾರರ ಸಹಾಯವಾಣಿ ಆಪ್ ಹಾಗೂ https://voters.eci.gov.in/ / VOTERS’ SERVICE PORTAL ಮೂಲಕ ಅನ್‍ಲೈನ್‍ನಲ್ಲಿ ನೇರವಾಗಿ ಸಲ್ಲಿಸಬೇಕಿದೆ ಎಂದು ವೆಂಕಟ್ ರಾಜಾ ತಿಳಿಸಿದರು.
ಮತದಾರರ ಪಟ್ಟಿ ಮತ್ತು ಚುನಾವಣೆಯ ಕುರಿತು ಮತದಾರರಿಗೆ ಮಾಹಿತಿ ನೀಡುವ ಸಲುವಾಗಿ ಭಾರತ ಚುನಾವಣಾ ಆಯೋಗವು ಮತದಾರರ ಸಹಾಯವಾಣಿ ಆಪ್ ಮೊಬೈಲ್ ಅಪ್ಲಿಕೇಷನ್ ಅಭಿವೃದ್ಧಿ ಪಡಿಸಿದ್ದು, ಎಲ್ಲಾ ಮತದಾರರು / ನಾಗರೀಕರು ತಮ್ಮ ಮೊಬೈಲ್‍ನಲ್ಲಿ ಮತದಾರರ ಸಹಾಯವಾಣಿ ಆಪ್ ಅನ್ನು ಡೌನ್‍ಲೋಡ್ ಮಾಡಿಕೊಳ್ಳಲು ಕೋರಿದರು.
ಹೆಚ್ಚಿನ ಮಾಹಿತಿಗೆ ಜಿಲ್ಲಾಧಿಕಾರಿಗಳ, ಉಪ ವಿಭಾಗಾಧಿಕಾರಿಗಳ ಮತ್ತು ತಹಶೀಲ್ದಾರರ ಕಚೇರಿಯನ್ನು ಸಂಪರ್ಕಿಸಬಹುದು ಹಾಗೂ www.ceokarnataka.kar.nic.in ವೆಬ್‍ಸೈಟ್‍ನಲ್ಲಿಯೂ ಸಹ ಹೆಚ್ಚಿನ ಮಾಹಿತಿ ಲಭ್ಯವಿದ್ದು, ಮಾಹಿತಿಯನ್ನು ಪಡೆಯಬಹುದು ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು.
ಮತ್ತಷ್ಟು ಮಾಹಿತಿ: ಭಾರತ ಚುನಾವಣಾ ಆಯೋಗ ನಿರ್ದೇಶನದಂತೆ ಭಾವಚಿತ್ರವಿರುವ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಅಕ್ಟೋಬರ್, ನವೆಂಬರ್ ಮತ್ತು ಡಿಸೆಂಬರ್-2023 ಮಾಹೆಯಲ್ಲಿ ಕೈಗೊಳ್ಳಲಾಗಿದ್ದು, ಕೊಡಗು ಜಿಲ್ಲೆಯ 208-ಮಡಿಕೇರಿ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿ ಅವರು ಪ್ರಕಟಿಸಿದರು.
ಲೋಕಸಭಾ ಸಾರ್ವತ್ರಿಕ ಚುನಾವಣೆ ಇರುವುದರಿಂದ ಅಂತಿಮ ಮತದಾರರ ಪಟ್ಟಿಯನ್ನು ಮತದಾರರು ಪರಿಶೀಲಿಸಿಕೊಂಡು, ಹೆಸರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ ಬಗ್ಗೆ ಖಚಿತ ಪಡಿಸಿಕೊಳ್ಳಲು ಕೋರಿದರು.
ಮತದಾರರ ಪಟ್ಟಿ ಪರಿಷ್ಕರಣೆ ಅವಧಿಯಲ್ಲಿ ನಮೂನೆ-06, 7 ಮತ್ತು 8 ರ ಅರ್ಜಿ ಸ್ವೀಕರಿಸಲಾಗಿದ್ದು, ನಿಯಮಾನುಸಾರ ಪರಿಶೀಲಿಸಿ ವಿಲೇವಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹೇಳಿದರು.
ಈ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಮಡಿಕೇರಿ-208 ಮತ್ತು ವಿರಾಜಪೇಟೆ-209 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಮೂನೆ-6 ರಲ್ಲಿ 7115 ಮಂದಿಯ ಅರ್ಜಿ ಸ್ವೀಕರಿಸಿದ್ದು, 6833 ಅರ್ಜಿಗಳನ್ನು ಅಂಗೀಕರಿಸಲಾಗಿದೆ. 282 ಅರ್ಜಿಗಳು ತಿರಸ್ಕೃತಗೊಂಡಿವೆ. ನಮೂನೆ-7 ರಲ್ಲಿ 6,436 ಮಂದಿಯ ಅರ್ಜಿ ಸ್ವೀಕೃತಿಯಾಗಿದ್ದು, 5435 ಅರ್ಜಿಗಳನ್ನು ಅಂಗೀಕರಿಸಲಾಗಿದೆ. 999 ಅರ್ಜಿಗಳು ತಿರಸ್ಕೃತಗೊಂಡಿವೆ. ನಮೂನೆ-8 ರಲ್ಲಿ 8111 ಅರ್ಜಿ ಸ್ವೀಕೃತಿಯಾಗಿದ್ದು, 7740 ಅರ್ಜಿಗಳನ್ನು ಅಂಗೀಕರಿಸಲಾಗಿದೆ. 371 ಅರ್ಜಿಗಳು ತಿರಸ್ಕೃತಗೊಂಡಿವೆ.
ಮತದಾರರ ಪಟ್ಟಿ ಪರಿಷ್ಕರಣೆ ಅವಧಿಯಲ್ಲಿ ನಮೂನೆ-6 ರಲ್ಲಿ 3055 ಅರ್ಜಿಗಳನ್ನು 18-19 ವರ್ಷದ ಯುವ ಮತದಾರರ ನೋಂದಣಿ ಕುರಿತಂತೆ ನಮೂನೆಗಳನ್ನು ಸ್ವೀಕರಿಸಲಾಗಿದ್ದು, 2940 ಅರ್ಜಿಗಳು ಅಂಗೀಕಾರವಾಗಿದೆ. 115 ಅರ್ಜಿಗಳು ತಿರಸ್ಕೃತಗೊಂಡಿವೆ.
ದಿನಾಂಕ:27-10-2023ರಂದು ಪ್ರಕಟಿಸಿದ ಕರಡು ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ ಒಟ್ಟು 546 ಮತಗಟ್ಟೆಗಳಿದ್ದು, 2,26,392 ಪುರುಷ ಮತದಾರರು, 2,33,503 ಮಹಿಳಾ ಮತದಾರರು, 21 ಇತರ ಮತದಾರರಿದ್ದು, ಒಟ್ಟು 4,59,916 ಮಂದಿ ನೋಂದಣಿಯಾಗಿದ್ದರು.
Breaking News
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*
- *ದೇಶ ದ್ರೋಹದ ಪ್ರಕರಣ ದಾಖಲಿಸಲು ಕೆ.ಜಿ.ಬೋಪಯ್ಯ ಆಗ್ರಹ*
- *ಬಿಜೆಪಿ, ಜೆಡಿಎಸ್ ಗೆ ಜನ ತಕ್ಕ ಪಾಠ ಕಲಿಸಿದ್ದಾರೆ : ಎಂ.ಎ.ಕಲೀಲ್ ಬಾಷ*
- *ಕೆವಿ ಎನ್ಸಿಸಿ ಕೆಡೆಟ್ ಗಳಿಂದ ಕಾಯ೯ಪ್ಪ ಪ್ರತಿಮೆ ಸ್ವಚ್ಛತೆ*
- *ಸೋಮವಾರಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ*