ಸೋಮವಾರಪೇಟೆ ಜ.23 : ಅಯೋಧ್ಯೆಯಲ್ಲಿ ಶ್ರೀರಾಮದೇವರ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಪಟ್ಟಣದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿತು.
ಪಟ್ಟಣದ ಶ್ರೀ ಗಣಪತಿ, ಬಸವೇಶ್ವರ, ಸೋಮೇಶ್ವರ, ವೆಂಕಟೇಶ್ವರ ಸೇರಿದಂತೆ ಗ್ರಾಮೀಣ ಭಾಗದ ದೇವಾಲಯಗಳಲ್ಲಿ ಪೂಜೆ ಸಲ್ಲಿಸಲಾಯಿತು.
ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಶ್ರೀ ಆಂಜನೇಯ ಮತ್ತು ರಾಮಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಶ್ರೀರಾಮಮಂದಿರದಲ್ಲಿ ಗಣಪತಿ ಹೋಮ, ಶ್ರೀರಾಮತಾರಕ ಹೋಮ, ವಿಶೇಷ ಪೂಜೆ, ಭಜನೆ, ಅನ್ನದಾನ ನೆರವೇರಿತು. ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಪೂಜೋತ್ಸವದಲ್ಲಿ ಭಾಗವಹಿಸಿದ್ದರು.
ಅಬ್ಬೂರುಕಟ್ಟೆ ಜಂಕ್ಷನ್‍ನಲ್ಲಿ ರಾಮಭಕ್ತರು ಅಯೋಧ್ಯೆಯಲ್ಲಿ ನಡೆಯುವ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮವನ್ನು ಎಲ್‍ಇಡಿ ಪರದೆಯಲ್ಲಿ ಪ್ರದರ್ಶಿಸಿದರು.
ದೇವಾಲಗಳಲ್ಲಿ ನೆರೆದಿದ್ದ ಭಕ್ತಾದಿಗಳಿಗೆ ಅನ್ನದಾನ ನಡೆಯಿತು.
ರಾಮಭಕ್ತರು ಪಟ್ಟಣದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಮಹಾತ್ಮಗಾಂಧಿ ಪ್ರತಿಮೆ ಸಮೀಪ ಪಾನಕ ವಿತರಿಸಲಾಯಿತು.










