ಮಡಿಕೇರಿ ಜ.23 NEWS DESK : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ “ಯುವನಿಧಿ” ಯೋಜನೆಯನ್ನು ಡಿಸೆಂಬರ್ 26 ರಂದು ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ.
2023 ರಲ್ಲಿ ಪದವಿ/ ಡಿಪ್ಲೋಮಾ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ/ಖಾಸಗಿ/ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮಒನ್, ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ http://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ “ಯುವನಿಧಿ” ಯೋಜನೆಗೆ ಅರ್ಜಿ ಸಲ್ಲಿಸಬಹುದು. ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ.ಗಳು ಹಾಗೂ ಡಿಪ್ಲೋಮಾ ಪದವೀಧರರಿಗೆ 1,500 ರೂ.ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳವರೆಗೆ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 18005999918 / 9113935220 ಗೆ ಕರೆ ಮಾಡುವ ಮೂಲಕ ಅಥವಾ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಹಾಗೂ ಜಿಲ್ಲಾ ಉದ್ಯೋಗಾಧಿಕಾರಿ ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಉಮಾ ತಿಳಿಸಿದ್ದಾರೆ.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*