ವಿರಾಜಪೇಟೆ ಜ.23 NEWS DESK : ಧಾರ್ಮಿಕ, ಐತಿಹಾಸಿಕವಾಗಿ ಮಹತ್ವ ಪಡೆದಿರುವ ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಪ್ರಯುಕ್ತ ತಾಲೂಕಿನ ಕೆದಮುಳ್ಳೂರು ಗ್ರಾಮದ ತೋರದ ತೋಮರತಪ್ಪ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿತು.
ಮಹಾಪೂಜೆ, ಮಹಾ ಮಂಗಳಾರತಿ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗ ನಡೆಯಿತು.
ಈ ಸಂದರ್ಭ ಗ್ರಾಮಸ್ಥರಾದ ಪರಮೇಶ್ವರ, ಗೌಡುದಾರೆ ಚೋಟು ಬಿದ್ದಪ್ಪ, ಕಿರಣ್ ಪೂಜಾರಿ, ಹೇಮಂತ್, ಮಾಳೇಟಿರ ಸನ್ನಿ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.









