ಮಡಿಕೇರಿ ಜ.23 NEWS DESK : ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆ ಪ್ರಯುಕ್ತ ಸುದರ್ಶನ ಬಡಾವಣೆಯ ಮುನೀಶ್ವರ ದೇವಾಲಯ ಸಮಿತಿ ಮತ್ತು ಮುನೀಶ್ವರ ಯುವಕ ಸಂಘದ ವತಿಯಿಂದ ವಿವಿಧ ಕಾರ್ಯಕ್ರಮ ಜರುಗಿತು.
ದೇವಾಲಯದಲ್ಲಿ ವಿಶೇಷ ಪೂಜೆ, ಪ್ರಸಾದ ವಿತರಣೆ ಜರುಗಿತು. ಬಳಿಕ ಬಡಾವಣೆ ನಿವಾಸಿಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಆಂಜನೇಯ ದೇವಾಲಯಕ್ಕೆ ಕಾಲ್ನಡಿಗೆ ಮೂಲಕ ತೆರಳಿ ಅಲ್ಲಿ ಜರುಗಿದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾದರು.
ರಾಮೋತ್ಸವ ಪ್ರಯುಕ್ತ ದೇವಾಲಯದಲ್ಲಿ ಸಂಜೆ ವಿಶೇಷ ಪೂಜೆ, ಪ್ರಾರ್ಥನೆ ಜರುಗಿತು. ಮಕ್ಕಳು ರಾಮ, ಸೀತೆಯ ವೇಷ ಧರಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸ್ಥಳೀಯರು ಭಕ್ತಿಗೀತೆಗಳನ್ನು ಹಾಡಿದರು. ನಂತರ ಸಮಿತಿ ಅಧ್ಯಕ್ಷ ಬಿ.ಡಿ.ಜಗದೀಶ್ ರೈ ಅಧ್ಯಕ್ಷತೆಯಲ್ಲಿ ಜರುಗಿದ ಸಭಾ ಕಾರ್ಯಕ್ರಮದಲ್ಲಿ ಅಯೋಧ್ಯೆಯ ಕರ ಸೇವೆಯಲ್ಲಿ ಪಾಲ್ಗೊಂಡಿದ್ದ ಸ್ವಯಂ ಸೇವಕರನ್ನು ಸನ್ಮಾನಿಸಿ ಗೌರವಿಸಲಾಯಿತು.
1992ರ ಕರಸೇವೆಯಲ್ಲಿ ಪಾಲ್ಗೊಂಡಿದ್ದ ಬಡಾವಣೆ ನಿವಾಸಿಗಳಾದ ಎಂ.ಪಿ.ಸುನೀಲ್ ಸುಬ್ರಹ್ಮಣಿ, ಮನು ಮಂಜುನಾಥ್, ಕೆ.ಆರ್.ರಮೇಶ್ ಅವರಿಗೆ ಫಲ ತಾಂಬೂಲ, ಅಯೋಧ್ಯೆ ರಾಮಮಂದಿರದ ಪ್ರತಿರೂಪವನ್ನು ನೀಡಿ ಸಮಿತಿ ಪದಾಧಿಕಾರಿಗಳು ಗೌರವಿಸಿದರು.
ಬಳಿಕ ಮಾತನಾಡಿದ ಸುನೀಲ್ ಸುಬ್ರಮಣಿ ಹಾಗೂ ಮಂಜುನಾಥ್, ತಾವು ಕರ ಸೇವೆಗಾಗಿ ಅಯೋಧ್ಯೆಗೆ ತೆರಳಿದ ಸಂದರ್ಭದ ಚಿತ್ರಣ, ಎದುರಾದ ಸಂದಿಗ್ಧ ಪರಿಸ್ಥಿತಿಯ ಬಗ್ಗೆ ಅನಿಸಿಕೆ ಹಂಚಿಕೊಂಡರು.
ಬಿ.ಡಿ.ಜಗದೀಶ್ ರೈ ಮಾತನಾಡಿ, ಲಕ್ಷಾಂತರ ಮಂದಿಯ ಹೋರಾಟ, ತ್ಯಾಗದ ಫಲವಾಗಿ ಇಂದು ಅಯೋಧ್ಯೆಯಲ್ಲಿ ಬೃಹತ್ ರಾಮಮಂದಿರ ನಿಮಾರ್ಣವಾಗಿದೆ. ಈ ಸಂದರ್ಭಕ್ಕೆ ಸಾಕ್ಷಿಯಾಗಿರುವ ನಾವು ಅದೃಷ್ಟವಂತರು. ಮಂದಿರ ನಿರ್ಮಾಣದ ಹಿಂದಿನ ತ್ಯಾಗ, ಬಲಿದಾನವನ್ನು ನಾವು ಮರೆಯುವಂತ್ತಿಲ್ಲ. ಹೀಗಾಗಿ ನಮ್ಮ ಬಡಾವಣೆಯ ಕರಸೇವಕರನ್ನು ಗುರುತಿಸಿ ಗೌರವಿಸುವ ಕಾರ್ಯ ಮಾಡಿದ್ದೇವೆ ಎಂದರು.
ಸಮಿತಿ ಉಪಾಧ್ಯಕ್ಷ ಎಂ.ಕೆ.ಕಾವೇರಪ್ಪ, ಕಾರ್ಯದರ್ಶಿ ಕೆ.ಆರ್.ಪ್ರಸಾದ್, ಮಹಿಳಾ ಸಂಘದ ಅಧ್ಯಕ್ಷೆ ಸುಶೀಲ, ನಗರಸಭೆ ಸದಸ್ಯೆ ಉಷಾ ಕಾವೇರಪ್ಪ, ದೇವಾಲಯ ಸಮಿತಿ ಮಾಜಿ ಅಧ್ಯಕ್ಷರಾದ ತಳೂರು ಆನಂದ, ಪಿ.ಟಿ.ಉನ್ನಿಕೃಷ್ಣ, ಸಲಹೆಗಾರ ತಿಮ್ಮಪ್ಪ ವೇದಿಕೆಯಲ್ಲಿದ್ದರು.
ವೈಷ್ಣವಿ ಶೆಟ್ಟಿ ಮತ್ತು ತಂಡದವರು ರಾಮನ ಕುರಿತ ಹಾಡು ಹಾಡಿದರು. ಶ್ರೀರಾಮಾಂಜನೇಯ ಭಜನಾ ಮಂಡಳಿ ಸದಸ್ಯರು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು. ಕಿಶೋರ್ ರೈ ಕತ್ತಲೆಕಾಡು ಕಾರ್ಯಕ್ರಮ ನಿರೂಪಿಸಿದರು.
Breaking News
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*
- *ದೇಶ ದ್ರೋಹದ ಪ್ರಕರಣ ದಾಖಲಿಸಲು ಕೆ.ಜಿ.ಬೋಪಯ್ಯ ಆಗ್ರಹ*
- *ಬಿಜೆಪಿ, ಜೆಡಿಎಸ್ ಗೆ ಜನ ತಕ್ಕ ಪಾಠ ಕಲಿಸಿದ್ದಾರೆ : ಎಂ.ಎ.ಕಲೀಲ್ ಬಾಷ*