ಮಡಿಕೇರಿ ಜ.24 NEWS DESK : ನೂತನವಾಗಿ ನಿರ್ಮಾಣಗೊಂಡಿರುವ ಸುಸಜ್ಜಿತ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೂತನ ಕಚೇರಿ ಭವನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.25 ರಂದು ಮಧ್ಯಾಹ್ನ ಉದ್ಘಾಟಿಸಲಿದ್ದಾರೆ.
ಗೃಹ ಸಚಿವ ಜಿ.ಪರಮೇಶ್ವರ್ ಅವರು ಕೂಡ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಎಸ್‌ಪಿ ಕಚೇರಿ ಉದ್ಘಾಟನೆ ನಂತರ ನಗರದ ಗಾಂಧಿ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮುಖ್ಯಮಂತ್ರಿಗಳು ಮಾತನಾಡಲಿದ್ದಾರೆ. ಇದೇ ಸಂದರ್ಭ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ ಮತ್ತು ಪೂರ್ಣಗೊಂಡ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.
ಮುಖ್ಯಮಂತ್ರಿಗಳ ಸ್ವಾಗತಕ್ಕೆ ಮಡಿಕೇರಿ ನಗರ ಸಜ್ಜಾಗುತ್ತಿದೆ, ಗಾಂಧಿ ಮೈದಾನದಲ್ಲಿ ಸಾವಿರಾರು ಜನರಿಗೆ ಆಸನದ ವ್ಯವಸ್ಥೆಯನ್ನು ಮಾಡಲಾಗಿದೆ. ವಾಹನದಟ್ಟಣೆ ಹೆಚ್ಚಾಗಬಹುದು ಎನ್ನುವ ಕಾರಣಕ್ಕೆ ನಗರದ ಜಿಲ್ಲಾ ಕ್ರೀಡಾಂಗಣ, ಜೂನಿಯರ್ ಕಾಲೇಜು ಮೈದಾನ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ ಮತ್ತು ಶಾಂತಿ ಚರ್ಚ್ ಬಳಿಯ ಮೈದಾನದಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
ಮುಖ್ಯಮಂತ್ರಿಗಳು ಗುರುವಾರ ಬೆಳಗ್ಗೆ ವಿರಾಜಪೇಟೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ.
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಗೆ ಆಗಮಿಸುತ್ತಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*