ವಿರಾಜಪೇಟೆ ಜ.24 NEWS DESK : ಕನ್ನಡ ಮಾಧ್ಯಮದಲ್ಲಿ ಓದಲು ಕೀಳರಿಮೆ ಇರಬಾರದು. ಕನ್ನಡ ಮಾದ್ಯಮದಲ್ಲಿ ವಿದ್ಯಾಭ್ಯಾಸ ಮಾಡಿದವರು ಇಂದು ಉನ್ನತ ಮಟ್ಟದ ಸ್ಥಾನವನ್ನು ಅಲಂಕರಿಸಿದ್ದಾರೆ ಎಂದು ಜಯಪ್ರಕಾಶ್ ನಾರಾಯಣ ಸ್ಮಾರಕ ಪ್ರೌಢಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಡಾ. ಎಂ.ಸಿ.ಕಾರ್ಯಪ್ಪ ಅಭಿಪ್ರಾಯಪಟ್ಟರು.
ಜಯಪ್ರಕಾಶ್ ನಾರಾಯಣ ಸ್ಮಾರಕ ಪ್ರೌಢಶಾಲೆಯ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಹೆಚ್ಚು ಓದಿ ಉನ್ನತ ಮಟ್ಟಕ್ಕೆ ಬೆಳೆಯುವಂತಾಗಬೇಕು. ಮಹಾನ್ ವ್ಯಕ್ತಿಗಳನ್ನು ಸ್ಮರಿಸಿಕೊಳ್ಳುವುದು ಮುಖ್ಯವಲ್ಲ, ಅವರಂತೆ ನಾವು ಆಗಬೇಕು ಎನ್ನುವ ಮನೋಭಾವನೆ ವಿದ್ಯಾರ್ಥಿಗಳಲ್ಲಿ ಬೆಳೆಯಬೇಕು ಎಂದರು.
ವಿರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ. ಕೆ.ಸಿ.ದಯಾನಂದ ಮಾತನಾಡಿ, ಶಾಲೆಗಳಲ್ಲಿ ನೂರಾರು ವಿದ್ಯಾರ್ಥಿಗಳನ್ನು ನೋಡಿಕೊಳ್ಳುವುದು ಶಿಕ್ಷಕರ ಜವಾಬ್ದಾರಿಯಾದರೆ, ಮನೆಗಳಲ್ಲಿರುವ ಮಕ್ಕಳನ್ನು ಸರಿಯಾದ ದಾರಿಯಲ್ಲಿ ನಡೆದುಕೊಳ್ಳುವಂತೆ ತಿದ್ದಿ ಬುದ್ದಿ ಹೇಳುವುದು ಪೋಷಕರ ಕರ್ತವ್ಯ ಎಂದರು.
ಕ್ಷೇತ್ರ ಸಮನ್ವಯ ಅಧಿಕಾರಿ ವನಜಾಕ್ಷಿ ಮಾತನಾಡಿ, ಶಾಲೆ ಹಾಗೂ ಮುಖ್ಯ ಶಿಕ್ಷಕರು ನಮಗೆ ಒಂದು ನೆರೆಮನೆಯಂತೆ. ಯಾವುದೇ ಕೆಲಸ ಕಾರ್ಯಗಳಿಗೂ ಸಹ ಇವರ ಸಹಕಾರ ಇದ್ದೇ ಇರುತ್ತದೆ. ವಿದ್ಯಾರ್ಥಿಗಳು ಈ ವರ್ಷದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.ನೂರು ಫಲಿತಾಂಶವನ್ನು ತೆಗೆದುಕೊಳ್ಳುವುದರ ಮೂಲಕ ಶಾಲೆಯ ಹೆಸರನ್ನು ಉಳಿಸುವ ಜವಾಬ್ದಾರಿ ಇದೆ ಎಂದು ಹೇಳಿದರು.
ವಾರ್ಷಿಕೋತ್ಸವದ ಪ್ರಸ್ತಾವಿಕ ಭಾಷಣವನ್ನು ಶಾಲಾ ಮುಖ್ಯೋಪಾಧ್ಯಾಯರಾದ ಲಾಲ್ ಕುಮಾರ್ ನಡೆಸಿಕೊಟ್ಟರು.
ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಡಾ. ಎಂ.ಸಿ.ಕಾರ್ಯಪ್ಪ ಅವರನ್ನು ಶಾಲಾ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಇದೇ ಸಂದರ್ಭ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಲಾಯಿತು. ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮವು ವಾರ್ಷಿಕೋತ್ಸವಕ್ಕೆ ಉತ್ತಮ ಮನರಂಜನೆ ಹಾಗೂ ಮೆರಗು ನೀಡಿತು.
ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿಯ ಉತ್ತಪ್ಪ, ಆಶಾ ಸುಬ್ಬಯ್ಯ ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಶಿಕ್ಷಕರಾದ ರಾಜೇಗೌಡ, ನಂದೀಶ್, ಕವಿತಾ ಸೇರಿದಂತೆ ಎಲ್ಲಾ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು, ಪೋಷಕರು, ಸಿಬ್ಬಂದಿ ವರ್ಗದವರು ಹಾಜರಿದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*