ಮಡಿಕೇರಿ ಜ.24 NEWS DESK : 2022-23 ನೇ ಸಾಲಿನ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಜ.28 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಮಡಿಕೇರಿ ನಗರದ ಶಾಲೆ, ಕಾಲೇಜುಗಳಲ್ಲಿ ನಡೆಯಲಿರುವ ಲಿಖಿತ ಪರೀಕ್ಷೆಯ ಸಂಬಂಧ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದೆ.
ಪುರುಷ ಮತ್ತು ತೃತೀಯ ಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‍ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‍ಗಳನ್ನು ಧರಿಸುವುದು, ಜಿಪ್ ಪಾಕೆಟ್‍ಗಳು, ದೊಡ್ಡ ಬಟನ್‍ಗಳು ಇರುವ ಶರ್ಟ್‍ಗಳನ್ನು ಧರಿಸತಕ್ಕದಲ್ಲ. ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‍ಗಳನ್ನು ಧರಿಸಬಾರದು. ಪರೀಕ್ಷಾ ಕೇಂದ್ರದೊಳಗೆ ಶೂಗಳನ್ನು ನಿಷೇಧಿಸಲಾಗಿದ್ದು, ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸುವುದು. ಕುತ್ತಿಗೆ ಸುತ್ತ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ ಎಂದು ಪೊಲೀಸ್ ಅಧೀಕ್ಷಕರಾದ ಕೆ.ರಾಮರಾಜನ್ ತಿಳಿಸಿದ್ದಾರೆ.



















