ಮಡಿಕೇರಿ ಜ.24 : ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದಲ್ಲಿ ಪ್ರಸಕ್ತ ಸಾಲಿನಿಂದ ಏಕಕಾಲಕ್ಕೆ ‘ದ್ವಿ ಪದವಿ’ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆಯೆಂದು ವಿವಿಯ ಕುಲಪತಿಗಳಾದ ಪ್ರೊ.ಶರಣಪ್ಪ ವಿ. ಹಲಸೆ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಯುಜಿಸಿ ನಿಯಮಾವಳಿಗಳಂತೆ ಪೂರ್ಣಾವಧಿಯಲ್ಲಿ (ರೆಗ್ಯೂಲರ್ ತರಗತಿ) ಯಾವುದೇ ವಿಶ್ವ ವಿದ್ಯಾನಿಲಯದಲ್ಲಿ ಒಂದು ಕೋರ್ಸ್ ಮಾಡುತ್ತಿರುವವರು ಮುಕ್ತ ವಿವಿಯಲ್ಲಿ ಮತ್ತೊಂದು ಕೋರ್ಸ್‍ನ್ನು ಏಕಕಾಲದಲ್ಲಿ ಮಾಡಲು ಅವಕಾಶವನ್ನು ಒದಗಿಸಲಾಗಿದೆ.ಈ ಸದವಕಾಶವನ್ನು ವಿದ್ಯಾರ್ಥಿಗಳು ಬಳಸಿಕೊಳ್ಳುವಂತೆ ಕೋರಿಕೊಂಡರು.
ಮುಕ್ತ ವಿವಿಗೆ ಎ+ ಮಾನ್ಯತೆ- ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯಕ್ಕೆ ನ್ಯಾಕ್‍ನಿಂದ ಎ+ ಮಾನ್ಯತೆ ದೊರಕಿದೆ. ರಾಷ್ಟ್ರದಲ್ಲಿ ಒಟ್ಟು 17 ಮುಕ್ತ ವಿವಿಗಳಿದ್ದು, ಇವುಗಳಲ್ಲಿ ಗುಜರಾತ್ ಮುಕ್ತ ವಿವಿ ಎ++ ಮಾನ್ಯತೆ ಪಡೆದಿದ್ದರೆ, ನಂತರದ ಸ್ಥಾನದಲ್ಲಿ ಎ+ ಮಾನ್ಯತೆಯೊಂದಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯ ಇರುವುದಾಗಿ ಸಂತಸ ವ್ಯಕಪಡಿಸಿದರು.
64 ವಿಷಯಗಳ ಅಧ್ಯಯನಕ್ಕೆ ಅವಕಾಶ- ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯಕ್ಕೆ ಯುಜಿಸಿಯು 2023 ರಿಂದ 2028ರವರೆಗೆ ಅನ್ವಯವಾಗುವಂತೆ 64 ವಿಷಯಗಳ ಕೋರ್ಸ್‍ಗಳನ್ನು ನಡೆಸಲು ಅವಕಾಶವನ್ನು ಒದಗಿಸಿದೆಯೆಂದು ಮಾಹಿತಿಯನ್ನಿತ್ತರು.
ಮುಕ್ತ ವಿವಿಯಲ್ಲಿ ಸ್ನಾತಕ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಶಿಕ್ಷಣ ಕ್ರಮಗಳಿಗೆ ಪ್ರವೇಶಾತಿ ನೀಡಲಾಗುತ್ತಿದ್ದು, ಇದರ ಜೊತೆಗೆ ಪ್ರಸಕ್ತ ಸಾಲಿನಿಂದ ಸಮಾಜ ಕಾರ್ಯ ಎಂಬಿಎ ವಿಭಾಗದಲ್ಲಿ ಆಸ್ಪತ್ರೆ ಮತ್ತು ಆರೋಗ್ಯ ಕಾಳಜಿ ನಿರ್ವಹಣೆ, ಎಂಸಿಎ ಹಾಗೂ 10 ಆನ್ ಲೈನ್ ಕೋರ್ಸ್‍ಗಳಿಗೆ ಪ್ರವೇಶಾತಿ ಮಾಡಲಾಗುತ್ತಿದೆಯೆಂದು ವಿವರಗಳನ್ನಿತ್ತರು. ಮುಕ್ತ ವಿವಿಯಲ್ಲಿ ಎಂಬಿಎ ಕೋರ್ಸ್‍ಗೆ ಹೆಚ್ಚಿನ ಬೇಡಿಕೆ ಇದೆ. ಖಾಸಗಿಯಾಗಿ ಎಂಬಿಎ ಮಾಡುವುದಿದ್ದಲ್ಲಿ ವಿದ್ಯಾರ್ಥಿ 15 ರಿಂದ 20 ಲಕ್ಷ ರೂ. ವ್ಯಯಿಸಬೇಕಾಗುತ್ತದೆ. ಆದರೆ, ಮುಕ್ತ ವಿವಿಯಲ್ಲಿ ಎಂಬಿಎ ವ್ಯಾಸಂಗಕ್ಕೆ 25 ಸಾವಿರ ರೂ. ಶುಲ್ಕವನ್ನಷ್ಟೆ ಪಡೆಯಲಾಗುತ್ತದೆಂದು ಪ್ರೊ. ಶರಣಪಪ್ಪ ವಿ. ಹಲಸೆ ತಿಳಿಸಿದರು.
ಪ್ರವೇಶಾತಿ ಪ್ರಾರಂಭ- ಪ್ರಸಕ್ತ 2023-24ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಯ ಪ್ರವೇಶಾತಿ ಇದೇ ಜ.10 ರಿಂದ ಆರಂಭವಾಗಿದ್ದು, ಮಾ.31 ಕೊನೆಯ ದಿನಾಂಕವಾಗಿದೆ. ರಾಜ್ಯ ವ್ಯಾಪಿ ವಿವಿಯ 34 ಪ್ರಾದೇಶಿಕ ಕೇಂದ್ರಗಳಿದ್ದು, ಈ ಕೇಂದ್ರಗಳಲ್ಲಿ ಪ್ರವೇಶಾತಿ ಪಡೆದುಕೊಳ್ಳಬಹುದಾಗಿದೆಯೆಂದು ಸ್ಪಷ್ಟಪಡಿಸಿದರು.
ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಮಡಿಕೇರಿ ಪ್ರಾದೇಶಿಕ ಕೇಂದ್ರ ಮಡಿಕೇರಿಯ ಸರ್ಕಾರಿ ಪಪೂ ಕಾಲೇಜು ಆವರಣದ ಫೀ.ಮಾ. ಕಾರ್ಯಪ್ಪ ಅಡಿಟೋರಿಯಂನಲ್ಲಿ ಕೇಂದ್ರ ಕಾರ್ಯಾಚರಿಸುತ್ತಿದೆ. ಪ್ರವೇಶಾತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಳನ್ನು ದೂ.08272-201147, 8073342310, 9141938803, 9483391260, 8296215714ನ್ನು ಸಂಪರ್ಕಿಸಬಹುದೆಂದು ತಿಳಿಸಿದರು.
ಬೋಧನಾ ಶುಲ್ಕ ರಿಯಾಯಿತಿ- ಮುಕ್ತ ವಿವಿಯಲ್ಲಿ ಸ್ನಾತಕ, ಸ್ನಾತಕೋತ್ತರ ಕೋರ್ಸ್‍ಗಳಿಗೆ ಪ್ರವೇಶಾತಿ ಪಡೆಯುವ ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳೆಯರಿಗೆ, ಸೈನ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವವರು ಮತ್ತು ಮಾಜಿ ಸೈನಿಕರ ವಿದ್ಯಾರ್ಥಿಗಳಿಗೆ ಸ್ನಾತಕ, ಸ್ನಾತಕೋತ್ತರ ಕೋರ್ಸ್‍ಗಳ ಬೋಧನಾ ಶುಲ್ಕದಲ್ಲಿ ಶೇ.15 ರಷ್ಟು ರಿಯಾಯಿತಿ ನೀಡಲಾಗುತ್ತದೆ. ಆಟೋ, ಕ್ಯಾಬ್ ಚಾಲಕರು ಮತ್ತು ಅವರ ಪತ್ನಿ ಇಲ್ಲವೆ ಪತಿ ಮತ್ತು ಇಬ್ಬರು ಮಕ್ಕಳಿಗೆ ಶೇ.25 ರಷ್ಟು ರಿಯಾಯಿತಿ, ಕೆಎಸ್‍ಆರ್‍ಟಿಸಿ, ಬಿಎಂಟಿಸಿ , ಎನ್‍ಡಬ್ಲ್ಯುಕೆಎಸ್‍ಆರ್‍ಟಿಸಿ, ಕೆಕೆಆರ್‌ಟಿಸಿ ನೌಕರರುಗಳಿಗೆ ಶೇ.25 ರಷ್ಟು ಬೋಧನಾ ಶುಲ್ಕದಲ್ಲಿ ರಿಯಾಯಿತಿ ನೀಡಲಾಗುತ್ತದೆಂದು ಸ್ಪಷ್ಟಪಡಿಸಿದರು.
ಬೋಧನಾ ಶುಲ್ಕದಲ್ಲಿ ತೃತೀಯ ಲಿಂಗದ ವಿದ್ಯಾರ್ಥಿಗಳು, ದೃಷ್ಠಿಹೀನ ವಿದ್ಯಾರ್ಥಿಗಳಿಗೆ (ಬಿಇಡಿ, ಎಂಬಿಎ ಹೊರತು ಪಡಿಸಿ), ಕೋವಿಡ್ ಸಾಂಕ್ರಾಮಿಕದಿಂದ ತಂದೆ,ತಾಯಿಯನ್ನು ಕಳೆದುಕೊಂಡ ಮಕ್ಕಳಿಗೆ ಅವರು ಅರ್ಹತೆ ಹೊಂದಿ ಪ್ರವೇಶ ಬಯಸುವ ಶಿಕ್ಷಣ ಕ್ರಮಗಳಿಗೆ ಪೂರ್ಣ ವಿನಾಯಿತಿ ನೀಡಲಾಗುತ್ತದೆಂದು ಮಾಹಿತಿಯನ್ನಿತ್ತರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿವಿಯ ಕಾರ್ಯನಿರ್ವಾಹಕ ಅಭಿಯಂತರ ಭಾಸ್ಕರ್ ಹಾಗೂ ಮಡಿಕೇರಿ ಪ್ರಾದೇಶಿಕ ಕೇಂದ್ರದ ನಿರ್ದೇಶಕಿ ಮುಕ್ಕಾಟಿರ ಸ್ಮಿತಾ ಸುಬ್ಬಯ್ಯ ಉಪಸ್ಥಿತರಿದ್ದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*