ಮಡಿಕೇರಿ ಜ.24 NEWS DESK : ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆಯು ಜನವರಿ, 25 ರಂದು ಬೆಳಗ್ಗೆ 10 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ, ವಿವಿದ್ದೋದ್ದೇಶ ಸಭಾಂಗಣದಲ್ಲಿ ನಡೆಯಲಿದೆ.
ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಸಿ.ಶ್ಯಾಮ್ ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ಇತರರು ಪಾಲ್ಗೊಳ್ಳಲಿದ್ದಾರೆ.