ಸೋಮವಾರಪೇಟೆ ಜ.25 : 75ನೇ ಗಣರಾಜ್ಯೋತ್ಸವದ ಪ್ರಯುಕ್ತ ಕೆಂಚಮ್ಮನ ಬಾಣೆ ಭಾರತ್ ಮಾತಾ ಸೇವಾ ಸಂಘದ ವತಿಯಿಂದ ಜ.26 ಮತ್ತು 27ರಂದು ರಿಪಬ್ಲಿಕ್ ಕಪ್ ಮುಕ್ತ ವಾಲಿಬಾಲ್ ಪಂದ್ಯಾವಳಿ ಹಾಗೂ ಗ್ರಾಮಸ್ಥರಿಗೆ ಗ್ರಾಮೀಣ ಕ್ರೀಡಾಕೂಟ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೆ.ಜೆ.ಸುನಿಲ್ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕಳೆದ 30 ವರ್ಷಗಳಿಂದ ಕೆಂಚಮ್ಮನ ಬಾಣೆ ಭಾರತ್ ಮಾತಾ ಸೇವಾ ಸಂಘದ ಆಶ್ರಯದಲ್ಲಿ ಕ್ರೀಡಾಕೂಟವನ್ನು ನಡೆಸಿಕೊಂಡು ಬರಲಾಗುತ್ತಿದ್ದು, ಜ.26 ಮತ್ತು 27ರಂದು ಕೆಂಚಮ್ಮನ ಬಾಣೆಯ ಭಾರತ್ ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಸುನಿಲ್ ಹೇಳಿದರು.
ಜ.26ರಂದು ವಲಯಮಟ್ಟದ ಕಬಡ್ಡಿ ಪಂದ್ಯಾವಳಿಗೆ ಚಾಲನೆ ದೊರೆಯಲಿದ್ದು, ಪ್ರಥಮ ಬಹುಮಾನ 3ಸಾವಿರ ರೂ., ದ್ವಿತೀಯ ಬಹುಮಾನ 2ಸಾವಿರ ನಗದು ಮತ್ತು ಆಕರ್ಷಕ ಟ್ರೋಫಿ ನೀಡಲಾಗುತ್ತದೆ.
27 ರಂದು ಮುಕ್ತವಾಲಿಬಾಲ್ ಪಂದ್ಯಾವಳಿ ನಡೆಯಲಿದ್ದು ಪ್ರಥಮ 14,444ರೂ, ದ್ವಿತೀಯ 7,777 ರೂ ನಗದು ಮತ್ತು ಆಕರ್ಷಕ ಟ್ರೋಫಿ ನೀಡಲಾಗುತ್ತದೆ.
ಕುಸುಬೂರು, ಕೆಂಚಮ್ಮನಬಾಣೆಯ ಗ್ರಾಮಸ್ಥರಿಗೂ ವಿವಿಧ ಕ್ರೀಡಾಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಪುರುಷರಿಗೆ ಗುಡ್ಡಗಾಡು ಓಟ, ಹಗ್ಗಜಗ್ಗಾಟ, ಮಹಿಳೆಯರಿಗೆ ಥ್ರೋಬಾಲ್, 100ಮಿ.ಓಟ, ನಿಂಬೆಹಣ್ಣು ಚಮಚ ಓಟ, ವಿಷದ ಚೆಂಡು, ಮ್ಯೂಜಿಕಲ್ ಚೇರ್, ಹಗ್ಗಜಗ್ಗಾಟ ನಡೆಯಲಿದೆ. ಮಕ್ಕಳಿಗೂ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿವೆ.
26 ರ ಬೆಳಿಗ್ಗೆ ಕ್ರೀಡಾಕೂಟವನ್ನು ಕಾಫಿ ಬೆಳೆಗಾರರಾದ ಗುರುಮಲ್ಲೇಶ್ ಉದ್ಘಾಟಿಸಲಿದ್ದಾರೆ. 27ರಂದು ಸಂಜೆ 6.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಶಾಸಕ ಡಾ.ಮಂತರ್‍ಗೌಡ, ಸಂಸದ ಪ್ರತಾಪ್‍ಸಿಂಹ, ಮಾಜಿ ಸಚಿವ ಅಪ್ಪಚ್ಚು ರಂಜನ್ ಮತ್ತಿತರ ದಾನಿಗಳು ಉಪಸ್ಥಿತರಿರುವರು. ಇದೇ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ನಡೆಯಲಿದೆ. ಸಂಜೆ ಸಾಂಸ್ಕøತಿಕ ಕಾರ್ಯಕ್ರಮ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊ.9900275510, 9380295528 ಸಂಪರ್ಕಿಸಲು ಕೋರಿದೆ.
ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಕೆ.ಜಿ.ವಿಜಯ ಕುಮಾರ್, ಮಾಜಿ ಅಧ್ಯಕ್ಷ ಬಿ.ಎಸ್.ಆದಂ, ಪದಾಧಿಕಾರಿಗಳಾದ ಕೆ.ಎಸ್.ಪ್ರತಾಪ್, ಬಿ.ಎನ್.ಬಸವರಾಜ್ ಇದ್ದರು.












