ಮಡಿಕೇರಿ ಜ.25 : ಅಸ್ಪೃಶ್ಯತೆ ನಿವಾರಣೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ‘ಸಮಾನತೆ ಕಡೆಗೆ’ ಎಂಬ ಕನ್ನಡ ಚಲನಚಿತ್ರವನ್ನು ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಪ್ರಾಯೋಜನೆ ಮಾಡಿ ಸರ್ಕಾರಿ ಟಿ.ವಿ.ಚಾನಲ್ ಆದ ಚಂದನ ವಾಹಿನಿಯಲ್ಲಿ ಜ.26 ರಂದು ಮಧ್ಯಾಹ್ನ 2.30 ರಿಂದ 4.30 ರವರೆಗೆ ಪ್ರಸಾರ ಮಾಡಲಾಗುವುದು. ಸಾರ್ವಜನಿಕರು ಈ ಚಿತ್ರವನ್ನು ವೀಕ್ಷಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಕೋರಿದ್ದಾರೆ.









