ಮಡಿಕೇರಿ ಜ.26 NEWS DESK : ಜಿಲ್ಲಾಡಳಿತ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಧ್ವಜಾರೋಹಣ ನೆರವೇರಿಸಿ, ಪಥಸಂಚಲನವನ್ನು ವೀಕ್ಷಿಸಿ ಗೌರವ ವಂದನೆಯನ್ನು ಸ್ವೀಕರಿಸಿದರು.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು.
ಈ ಸಂದರ್ಭ ಜಿಲ್ಲಾ ಪೊಲೀಸ್ ಇಲಾಖೆ, ಎನ್ಸಿಸಿ, ಗೃಹ ರಕ್ಷಕ ದಳದಿಂದ ನಡೆದ ಪಥಸಂಚಲನ ಗಮನ ಸೆಳೆಯಿತು.
ಜಿಲ್ಲಾ ಶಸಸ್ತ್ರ ಮಿಸಲು ಪಡೆ, ಅರಣ್ಯ ಇಲಾಖೆ, ಎನ್ಸಿಸಿ ವಿದ್ಯಾರ್ಥಿಗಳು, ಸ್ಕೌಟ್ ಆಂಡ್ ಗೈಡ್ಸ್ ಹಾಗೂ ವಿವಿಧ ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.