ಮಡಿಕೇರಿ ಜ.26 NEWS DESK : ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ಕಚೇರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಶುಭಹಾರೈಸಿದರು.
ಕರ್ನಾಟಕ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮದ ವತಿಯಿಂದ 12 ಕೋಟಿ ರೂ.ಗಳ ವೆಚ್ಚದಲ್ಲಿ ಕೊಡಗಿನ ಸಂಪ್ರದಾಯದಂತೆ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ನಿರ್ಮಾಣವಾಗಿದೆ. ಕಚೇರಿ ಎಷ್ಟು ದೊಡ್ಡದು ಮುಖ್ಯವಲ್ಲ ಜನರ ಸಮಸ್ಯೆಗಳಿಗೆ ನ್ಯಾಯ ಕೊಡಿಸುವುದು ಬಹಳ ಮುಖ್ಯ ಎಂದರು.
ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವರಾದ ಬೋಸರಾಜು, ಗೃಹ ಸಚಿವರಾದ ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ರೇಷ್ಮೆ ಸಚಿವರಾದ ಕೆ.ವೆಂಕಟೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಮಡಿಕೇರಿ ಶಾಸಕರಾದ ಮಂಥರ್ ಗೌಡ, ಕೆಪಿಸಿಸಿ ಸಾಮಾಜಿಕ ಸಂವಹನ ವಿಭಾಗದ ಅಧ್ಯಕ್ಷರಾದ ಮೆಹರೂಸ್ ಖಾನ್ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.