ಚೆಟ್ಟಳ್ಳಿ ಜ.26 NEWS DESK : ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 75ನೇ ಗಣರಾಜ್ಯೋತ್ಸವವನ್ನು
ಸಂಭ್ರಮದಿಂದ ಆಚರಿಸಲಾಯಿತು.
ಸಂಘದ ಆವರಣದಲ್ಲಿ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿಉತ್ತಪ್ಪ ಧ್ವಜಾರೋಹಣ ನೆರವೇರಿಸಿದರು.
ನಂತರ ಮಾತನಾಡಿದ ಅವರು, ರಾಷ್ಟ್ರದ ಬಲವರ್ಧನೆಗೆ ಯುವಕರು ಹಾಗೂ ಮುಂದಿನ ಪೀಳಿಗೆಯವರು ಶಕ್ತಿ ಮೀರಿ ರಾಷ್ಟ್ರವನ್ನು ಒಗ್ಗೂಡಿಸುವ ಕೆಲಸವನ್ನು ಮಾಡಬೇಕು ಎಂದು ಕರೆಕೊಟ್ಟರು. ಸ್ವಾತಂತ್ರ್ಯ ಹೋರಾಟಗಾರರು ಮಾಡಿದ ಬಲಿದಾನವನ್ನು ನೆನೆಸಿಕೊಂಡರು.
ಈ ಸಂದರ್ಭ ಸಂಘದ ಉಪಾಧ್ಯಕ್ಷ ಪೇರಿಯನ ಪೂಣಚ್ಚ, ಸಂಘದ ನಿರ್ದೇಶಕರುಗಳು ಹಾಗೂ ಸಂಘದ ಸಿಬ್ಬಂದಿಗಳು ಹಾಜರಿದ್ದರು.







