ನಾಪೋಕ್ಲು ಜ.27 NEWS DESK : ಕಕ್ಕಬ್ಬೆ ಕೇಂದ್ರ ವಿದ್ಯಾಸಂಸ್ಥೆಯಲ್ಲಿ ಸಂಸ್ಥೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಅಧ್ಯಕ್ಷರಾದ ಕೇಟೋಳಿರ ಪಿ. ಕುಟ್ಟಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳು ಉತ್ತಮ ಆದರ್ಶ ಹಾಗೂ ದೇಶಭಕ್ತಿಯನ್ನು ಬೆಳೆಸಿಕೊಳ್ಳಬೇಕು, ಗುರು ಹಿರಿಯರಿಗೆ ಗೌರವದೊಂದಿಗೆ ಶಿಸ್ತು ಬದ್ದ ಜೀವನವನ್ನು ಅಳವಡಿಸಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರು.
ಶಾಲಾ ಮುಖ್ಯ ಶಿಕ್ಷಕ ಡಿ.ಅನಿಲ್ ರಾಜ್ ಹಾಗೂ ಶಿಕ್ಷಕಿ ಬಬಿತಾ, ಶಿಕ್ಷಕ ಶರತ್ ಮಾತನಾಡಿ, ದಿನದ ಮಹತ್ವದ ಬಗ್ಗೆ ತಿಳಿಹೇಳಿದರು.
ಈ ಸಂದರ್ಭ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ವಿಜೇತರಾದ ವಿದ್ಯಾರ್ಥಿಗಳಿಗೆ ಅಧ್ಯಕ್ಷರಾದ ಕೇಟೋಳಿರ ಪಿ. ಕುಟ್ಟಪ್ಪ ಬಹುಮಾನ ವಿತರಿಸಿ ವಿಶುಭ ಹಾರೈಸಿದರು.
ವರದಿ : ದುಗ್ಗಳ ಸದಾನಂದ.









