ಕುಶಾಲನಗರ,ಜ 27 NEWS DESK : ಕುಶಾಲನಗರ ಮತ್ತು ಹಾರಂಗಿ ರಸ್ತೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ವಾಗುತ್ತಿದ್ದು, ರಸ್ತೆಯಲ್ಲಿ ರಸ್ತೆ ಉಬ್ಬುಗಳನ್ನು ಅಳವಡಿಸುವಂತೆ ಕೂಡುಮಂಗಳೂರು ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ಧೀನ್ ಆಗ್ರಹಿಸಿದ್ದಾರೆ.
ಕುಶಾಲನಗರದಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು, ಇತ್ತೀಚೆಗೆ ಕುಶಾಲನಗರ ಹಾರಂಗಿ ರಸ್ತೆ ಡಾಂಬರೀಕರಣವಾಗಿದೆ. ಜೊತೆಗೆ ರಸ್ತೆ ಅಗಲೀಕರಣ ಕೂಡ ಆಗಿದ್ದು, ರಸ್ತೆಯಲ್ಲಿ ವಾಹನಗಳು ಅತಿ ವೇಗವಾಗಿ ಚಲಿಸುತ್ತಿದೆ. ಅತಿವೇಗ ಹಾಗೂ ಅಜಾಗರೂಕತೆಯಿಂದ ರಸ್ತೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ವಾಗುತ್ತಿದೆ. ಆದ್ದರಿಂದ ಅಪಘಾತಗಳನ್ನು ತಡೆಗಟ್ಟುವ ದೃಷ್ಟಿಯಿಂದ ಕುಶಾಲನಗರ ಹಾರಂಗಿ ರಸ್ತೆಯಲ್ಲಿ ಅಗತ್ಯವಾದ ಕಡೆಗಳಲ್ಲಿ ರಸ್ತೆ ರಸ್ತೆ ಉಬ್ಬುನ್ನು ಅಳವಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಈ ರಸ್ತೆಯಲ್ಲಿ ಮೂಕಾಂಬಿಕ ಶಾಲೆ, ಸುಂದರನಗರ ಪ್ರಥಮ ದರ್ಜೆ ಕಾಲೇಜು ಇದೆ. ದಿನನಿತ್ಯ ರಸ್ತೆಯಲ್ಲಿ ನೂರಾರು ವಿದ್ಯಾರ್ಥಿಗಳು ಸಂಚರಿಸುತ್ತಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ಅನಾಹುತಗಳನ್ನು ತಡೆಯುವ ದೃಷ್ಟಿಯಿಂದ ಆದಷ್ಟು ಬೇಗನೇ ರಸ್ತೆ ಉಬ್ಬುಗಳನ್ನು ಅಳವಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಕೂಡುಮಂಗಳೂರು ಗ್ರಾ.ಪಂ ವತಿಯಿಂದ ರಸ್ತೆ ಉಬ್ಬು ಅಳವಡಿಸುವಂತೆ ಸಂಬಂಧಿಸಿದ ಪೊಲೀಸ್ ಉಪ ಅಧೀಕ್ಷರಿಗೆ ಪತ್ರ ಬರೆಯಲಾಗಿದೆ. ತಕ್ಷಣ ಪೊಲೀಸರು ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.









