ಕುಶಾಲನಗರ ಜ.27 : ಕೂಡಿಗೆ ಕೊಡಗು ಸೈನಿಕ ಶಾಲೆಯ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಪತ್ರಿಕಾ ಮಾಧ್ಯಮದ ಸಹಕಾರ ಸ್ಮರಣೀಯವಾಗಿದೆ ಎಂದು ಶಾಲೆಯ ಆಡಳಿತ ಅಧಿಕಾರಿ ವಿಂಗ್ ಕಮಾಂಡರ್ ಪಿ.ಪ್ರಕಾಶ್ ರಾವ್ ಹೇಳಿದರು.
ಸೈನಿಕ ಶಾಲೆಯ ಪ್ರಾಂಶುಪಾಲರು ಕುಶಾಲನಗರ ತಾಲೂಕು ಪತ್ರಕರ್ತರಿಗೆ ಸೈನಿಕ ಶಾಲೆಯಲ್ಲಿ ಏರ್ಪಡಿಸಿದ್ದ ಚಹಾ ಕೂಟದಲ್ಲಿ ಅವರು ಮಾತನಾಡಿ, ಕೊಡಗು ಜಿಲ್ಲೆಯ ಹೆಮ್ಮೆಯ ಸೈನಿಕ ಶಾಲೆಯ ಚಟುವಟಿಕೆಗಳ ಬಗ್ಗೆ ಮಾಹಿತಿ ಒದಗಿಸಿದರು. ಮುಂದಿನ ದಿನಗಳಲ್ಲಿ ಇದೇ ರೀತಿಯ ಸಹಕಾರ ಬಯಸಿದರು. ಪತ್ರಿಕಾ ಮಾಧ್ಯಮ ಮಿತ್ರರಿಗೆ ತಮ್ಮ ಶಾಲೆಯ ಪರವಾಗಿ ಕೃತಜ್ಞತೆ ಸಲ್ಲಿಸಿದರು.
ಚಹಾ ಕೂಟದಲ್ಲಿ ಪಾಲ್ಗೊಂಡು ಮಾತನಾಡಿದ ಕುಶಾಲನಗರ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್ ಚಂದ್ರಮೋಹನ್, ಕಳೆದ 17 ವರ್ಷಗಳಿಂದ ಕೊಡಗು ಸೈನಿಕ ಶಾಲೆಯ ಆಗುಹೋಗುಗಳ ಬಗ್ಗೆ ಪತ್ರಿಕೆ ಮಾಧ್ಯಮಗಳ ಮೂಲಕ ಸಮಗ್ರ ಮಾಹಿತಿಯನ್ನು ಸಮಾಜಕ್ಕೆ ನೀಡುವ ಕೆಲಸ ನಿರಂತರವಾಗಿ ನಡೆದಿದೆ. ಕೊಡಗು ಸೈನಿಕ ಶಾಲೆ ಜಿಲ್ಲೆಯ ಹೆಮ್ಮೆಯ ಸಂಸ್ಥೆಯಾಗಿದ್ದು ಅಭಿವೃದ್ಧಿ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭ ಸೈನಿಕ ಶಾಲೆಯ ಉಪ ಪ್ರಾಂಶುಪಾಲರಾದ ಸ್ಕ್ವಾಡ್ರನ್ ಲೀಡರ್ ವಿ ಪಿ ಮನ್ ಪ್ರೀತ್ ಸಿಂಗ್ ಹಾಗೂ ತಾಲೂಕಿನ ಪತ್ರಕರ್ತರು ಇದ್ದರು.









