ಮಡಿಕೇರಿ ಜ.29 NEWS DESK : ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ಅಳವಡಿಸಲಾಗಿದ್ದ ಹನುಮ ಧ್ವಜವನ್ನು ತೆರವುಗೊಳಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂಗಳ ಭಾವನೆಗೆ ದಕ್ಕೆ ಉಂಟು ಮಾಡಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕಾಂಗ್ರೆಸ್ ಸರ್ಕಾರ ಓಲೈಕೆ ರಾಜಕಾರಣ ಮಾಡುತ್ತಿದ್ದು, ಹಿಂದೂ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರAಜನ್, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ.ಸುನೀಲ್ ಸುಬ್ರಮಣಿ, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ.ಸತೀಶ್, ಬಿಜೆಪಿ ಜಿಲ್ಲಾ ವಕ್ತಾರ ಮಹೇಶ್ ಜೈನಿ, ಮಾಜಿ ಅಧ್ಯಕ್ಷ ರಾಬಿನ್ ದೇವಯ್ಯ, ನಗರಾಧ್ಯಕ್ಷ ಮನು ಮಂಜುನಾಥ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.












