ಮಡಿಕೇರಿ ಜ.29 : ಕಕ್ಕಬ್ಬೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಎಸ್‍ಡಿಎಂಸಿ ಅಧ್ಯಕ್ಷ ಕೆ.ಎ.ಕಾರ್ಯಪ್ಪ ಧ್ವಜಾರೋಹಣ ನೆರವೇರಿಸಿದರು.
ಶಾಲಾ ಮಕ್ಕಳ ಸಾಂಸ್ಕøತಿಕ ಕಾರ್ಯಕ್ರಮ ಗಮನ ಸೆಳೆಯಿತು.
ಪ್ರತಿವರ್ಷದಂತೆ ಈ ಬಾರಿಯು ವಿದ್ಯಾರ್ಥಿಗಳಿಗೆ ದತ್ತಿನಿಧಿ ವಿತರಿಸಲಾಯಿತು.
ಅಕ್ಷರ ದಾಸೋಹದ ಮುಖ್ಯ ಅಡುಗೆಯವರಾಗಿ ಸುದೀರ್ಘ ಸೇವೆ ಸಲ್ಲಿಸಿ ವಯೋ ನಿವೃತ್ತಿಯಾದ ಚೋಂದಮ್ಮ ಅವರನ್ನು ಎಸ್‍ಡಿಎಂಸಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ದತ್ತಿನಿಧಿ ಹಾಗೂ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಹಾಗೂ ಶಿಕ್ಷಕರಿಗೆ ಮುಖ್ಯ ಅತಿಥಿಗಳು ಬಹುಮಾನ ವಿತರಿಸಿ, ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಕುಂಜಿಲ-ಕಕ್ಕಬ್ಬೆ ಗ್ರಾ.ಪಂ ಅಧ್ಯಕ್ಷರಾದ ಪಿ.ಶಿಲ್ಪ, ಗ್ರಾ.ಪಂ ಸದಸ್ಯರಾದ ಕಲಿಯಂಡ ಸಂಪನ್ ಅಯ್ಯಪ್ಪ, ಹೆಚ್.ಡಿ.ಇಂದಿರಾ, ಎಸ್‍ಡಿಎಂಸಿ ಸದಸ್ಯರು, ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಪ್ರಭಾರ ಮುಖ್ಯ ಶಿಕ್ಷಕಿ ಮಾಲತಿ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಿಕ್ಷಕರಾದ ಎಂ.ಹೆಚ್.ರಜೀನಾ ನಿರೂಪಿಸಿದರು, ಅತಿಥಿ ಶಿಕ್ಷಕಿ ಜಲಜಾಕ್ಷಿ ವಂದಿಸಿದರು.