ಮಡಿಕೇರಿ ಜ.29 : 2023-24ನೇ ಸಾಲಿನ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ವಿರಾಜಪೇಟೆಯ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.
ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿಯಾದ ಕ್ಷಮಾ ಕಾವೇರಮ್ಮ ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಅಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ರಸಪ್ರಶ್ನೆ ಸ್ಪರ್ಧಾ ವಿಭಾಗದಲ್ಲಿ 9ನೇ ತರಗತಿಯ ವಿದ್ಯಾರ್ಥಿಗಳಾದ ಪಿ.ಎಸ್. ದೇವಯ್ಯ ಹಾಗೂ ಎಂ.ನಿಶಾನ್ ತಾಲೂಕು ಮಟ್ಟದಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಇವರಿಗೆ ಶಾಲಾ ಆಡಳಿತ ಮಂಡಳಿಯವರು ಹಾಗೂ ಬೋಧಕ ಬೋಧಕೇತರ ವೃಂದದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.
ಈ ಸಂದರ್ಭದಲ್ಲಿ ಪ್ರೌಢಶಾಲಾ ವಿಭಾಗದ ಸಂಯೋಜಕರಾದ ಚೈತ್ರ ಹಾಗೂ ಸಹ ಶಿಕ್ಷಕಿ ಬಿ.ಪಿ.ಉಷಾ ಉಪಸ್ಥಿತರಿದ್ದರು.









