ಮಡಿಕೇರಿ ಜ.30 NEWS DESK : ಸುಂಟಿಕೊಪ್ಪ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ರಜತ ಮಹೋತ್ಸವ ಅಂಗವಾಗಿ ಏರ್ಪಡಿಸಲಾಗಿದ್ದ ಡ್ಯಾನ್ಸ್ ಮೇಳದಲ್ಲಿ ಮಡಿಕೇರಿಯ ಕಿಂಗ್ಸ್ ಆಫ್ ಕೂರ್ಗ್ ಪ್ರಥಮ ಸೇರಿದಂತೆ ಮೂರು ಬಹುಮಾನಗಳನ್ನು ತನ್ನದಾಗಿಸಿಕೊಂಡಿದೆ.
ಸುಂಟಿಕೊಪ್ಪದ ವಾಹನ ಚಾಲಕರ ಸಂಘದ ಸಾರ್ವಜನಿಕ ವೇದಿಕೆಯಲ್ಲಿ ನಡೆದ ಸ್ಪರ್ಧೆಯಲ್ಲಿ ಸಾರ್ವಜನಿಕ ವಿಭಾಗದಲ್ಲಿ ಪ್ರಥಮ, ಕಾಲೇಜು ವಿಭಾಗದಲ್ಲಿ ಪ್ರಥಮ, ಹಾಗೂ ಪ್ರಾಥಮಿಕ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿ ಸಾಧನೆ ಮಾಡಿದೆ.
ಇದರೊಂದಿಗೆ ಮುಳಿಯ ಜುವೆಲ್ಸ್ ಆನ್‌ಲೈನ್ ಮೂಲಕ ನಡೆಸಿದ ಮುಳಿಯ ರಾಷ್ಟ್ರ ಸಿಂಚನ ನೃತ್ಯ ಸ್ಪರ್ಧೆಯ ಗುಂಪು ಸ್ಪರ್ಧೆ ವಿಭಾಗದಲ್ಲಿಯೂ ದ್ವಿತೀಯ ಸ್ಥಾನ ಗಳಿಸಿದೆ. ಕಿಂಗ್ಸ್ ಆಫ್ ಕೂರ್ಗ್ ನ ನೃತ್ಯ ಸಂಯೋಜಕ ಮಹೇಶ್ ಹಾಗೂ ಕಿರಣ್ ಅವರುಗಳ ಮಾರ್ಗದರ್ಶನದಲ್ಲಿ ಸಂಸ್ಥೆಯ ಕಲಾವಿದರು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.








