ಮಡಿಕೇರಿ ಜ.31 NEWS DESK : ಪ್ರಸಕ್ತ (2023-24) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ‘ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಫೆ.15 ರವರೆಗೆ ಅವಧಿ ವಿಸ್ತರಿಸಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ https://ssp.postmatric.karnataka.gov.in ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗೆ ಇಲಾಖಾ ವೆಬ್ಸೈಟ್ https://bcwd.karnataka.gov.in ನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ಸಂಖ್ಯೆ 8050770005, ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್:postmatrichelp@karnataka.gov.in ದೂ.ಸಂ.080-35254757 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
Breaking News
- *ಹೆಗ್ಗಳ ಶ್ರೀ ಗೋಪಾಲಕೃಷ್ಣ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
- *ಕೂತಿನಾಡು : ದೇವಾಲಯದ ಜೀರ್ಣೋದ್ಧಾರಕ್ಕೆ ಆರೋಡ ತಾಂಬೂಲ ಪ್ರಶ್ನೆ*
- *ಮಡಿಕೇರಿ : ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭ*
- ಕುಶಾಲನಗರ ಕನ್ನಡ ಭಾರತಿ ಕಾಲೇಜಿನಲ್ಲಿ ಅಕ್ಷರ ಜ್ಯೋತಿ ಯಾತ್ರೆ ಕುರಿತು ಉಪನ್ಯಾಸ : ವಿದ್ಯಾರ್ಥಿಗಳಲ್ಲಿ ಉತ್ತರ ಪ್ರೇರಣೆ, ಸ್ಫೂರ್ತಿ ಬೆಳೆಸಬೇಕು : ಬಸವಕುಮಾರ್ ಪಾಟೀಲ್*
- *ಶ್ರದ್ಧಾಭಕ್ತಿಯಿಂದ ಜರುಗಿದ ಅರಪಟ್ಟು ಶ್ರೀ ಅಯ್ಯಪ್ಪ ಸ್ವಾಮಿ ವಾರ್ಷಿಕ ಮಹಾಪೂಜೆ*
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*