ಚೆಯ್ಯಂಡಾಣೆ ಜ.30 NEWS DESK : ಸಂವಿಧಾನ ದಿನಾಚರಣೆಯ ಅಂಗವಾಗಿ ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲಾಡಳಿತದ ವತಿಯಿಂದ ಸಂವಿಧಾನದ ಮಹತ್ವದ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಲಾದ ಸಂವಿಧಾನ ಜಾಗೃತಿ ಜಾಥಾದ ರಥವನ್ನು ಚೆಯ್ಯ0ಡಾಣೆಯಲ್ಲಿ ಸ್ವಾಗತಿಸಲಾಯಿತು.
ಚೆಯ್ಯ0ಡಾಣೆ ಪಟ್ಟಣದಲ್ಲಿ ಗ್ರಾ.ಪಂ ಪದಾಧಿಕಾರಿಗಳು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ಬಳಿಕ ಪಟ್ಟಣದ ಮುಖ್ಯಬೀದಿಗಳಲ್ಲಿ ವಿದ್ಯಾರ್ಥಿಗಳ ವಾದ್ಯಗೋಷ್ಠಿಗಳೊಂದಿಗೆ ತೆರಳಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.
ಈ ಸಂದರ್ಭ ಗ್ರಾ.ಪಂ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ ಅಧ್ಯಕ್ಷತೆಯಲ್ಲಿ ಆಯೋಜಿಸಲಾದ ಸಭಾ ಕಾರ್ಯಕ್ರಮದಲ್ಲಿ ಶಿಕ್ಷಕಿ ಸತ್ಯಮ್ಮ ಸಂವಿಧಾನ ರಚನೆ ಮತ್ತು ಅದರ ಆಶಯಗಳ ಕುರಿತು ಮಾಹಿತಿ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಸಹಾಯಕ ನಿರ್ದೇಶಕ ಬಾಲಕೃಷ್ಣ ರೈ ಸಂವಿಧಾನ ಜಾಥಾ ಕಾರ್ಯಕ್ರಮದ ಕುರಿತು ವಿವರಿಸಿದರು.
ಬಳಿಕ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನದ ಮಹತ್ವದ ಕುರಿತು ಆಯೋಜಿಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನ ವಿತರಿಸಿದರು.
ಈ ಸಂದರ್ಭ ಗ್ರಾ.ಪಂ ಉಪಾಧ್ಯಕ್ಷ ಕೋಡಿರ ವಿನೋದ್ ನಾಣಯ್ಯ, ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ, ಕ್ಲಸ್ಟರ್ ಸಿ ಆರ್ ಪಿ ಉಷಾ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪ್ರೇಮಾ ಕುಮಾರಿ, ಜಯಪ್ರದಾ, ಗ್ರಾ.ಪಂ ಸದಸ್ಯರು, ಶಾಲಾ ಮುಖ್ಯ ಶಿಕ್ಷಕರು, ವಿದ್ಯಾರ್ಥಿಗಳು ಶಿಕ್ಷಕ ವೃಂದ, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ವರದಿ : ಅಶ್ರಫ್