ಮಡಿಕೇರಿ ಜ.31 NEWS DESK : ಕೊಡಗು ಜಿಲ್ಲಾ ಬಿಜೆಪಿಯ ಕಾರ್ಯಕಾರಿ ಸಮಿತಿ ಸಭೆ ಫೆ.2 ರಂದು ಮಡಿಕೇರಿಯ ಕಾವೇರಿ ಹಾಲ್‍ನಲ್ಲಿ ನಡೆಯಲಿದೆ ಎಂದು ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಭೀಮಯ್ಯ ತಿಳಿಸಿದ್ದಾರೆ.
ಸಭೆಯಲ್ಲಿ ಮಾಜಿ ಸಚಿವರುಗಳಾದ ಆರ್.ಅಶೋಕ್, ಸುನಿಲ್ ಕುಮಾರ್, ಕೋಟ ಶ್ರೀನಿವಾಸ್ ಪೂಜಾರಿ ಸೇರಿದಂತೆ ಸಂಸದರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ವಿವಿಧ ಘಟಕಗಳ ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಇದೇ ಸಭೆಯಲ್ಲಿ ನೂತನ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ಪದಗ್ರಹಣ ಕಾರ್ಯಕ್ರಮವು ನಡೆಯಲಿದೆ ಎಂದರು.









