ಬೆಂಗಳೂರು ಜ.31 NEWS DESK : జిಲ್ಲಾ ಮಟ್ಟದ ಎಲ್ಲಾ ಇಲಾಖೆಗಳಲ್ಲಿ ಅನುಷ್ಠಾನವಾಗುವ ಯೋಜನೆಗಳ ಕ್ಷೇತ್ರಮಟ್ಟದ ಪ್ರಗತಿ ವೀಕ್ಷಣೆಗೆ ಪೂರಕವಾಗಿ ಅಭಿವೃದ್ಧಿ ಪಡಿಸಿರುವ “ಪ್ರಗತಿ ಮೊಬೈಲ್ ಅಪ್ಲಿಕೇಶನ್” ತಂತ್ರಾಂಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ಪ್ರಗತಿ ಮೊಬೈಲ್ ಅಪ್ಲಿಕೇಶನ್ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳ ಪರಿಣಾಮಕಾರಿ ಮೇಲ್ವಿಚಾರಣೆಗೆ ಸಹಾಯ ಮಾಡುತ್ತದೆ ಮತ್ತು ಅಧಿಕಾರಿಗಳು ವೇಳಾಪಟ್ಟಿಯ ಪ್ರಕಾರ ಸಂಸ್ಥೆಗಳಿಗೆ ಭೇಟಿ ನೀಡುವುದರಿಂದ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಅವುಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ. ಯೋಜನೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಮತ್ತು ನಿಧಿಯ ಪರಿಣಾಮಕಾರಿ ಬಳಕೆಗೆ ನೆರವಾಗಲಿದೆ.
ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿದಂತೆ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.