ಮಡಿಕೇರಿ ಜ.31 NEWS DESK : ಪ್ರಧಾನಿ ಮೋದಿ ಅವರು ದಿನದ ಹದಿನೆಂಟು ಗಂಟೆ ದುಡಿಯುತ್ತಿದ್ದಾರೆ, ದೇಶ ಅಭಿವೃದ್ಧಿ ಹೊಂದುತ್ತಿದೆ ಎಂದು ಬಿಜೆಪಿ ಮಂದಿ ಹೇಳಿಕೊಳ್ಳುತ್ತಿದ್ದಾರೆ. ಆದರೆ ದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಕಾಣುತ್ತಿಲ್ಲ, ಬದಲಿಗೆ ಪ್ರತಿಯೊಬ್ಬ ಪ್ರಜೆಯ ತಲೆಗೆ 4.50 ಲಕ್ಷ ರೂ. ಸಾಲದ ಹೊರೆಯನ್ನು ಹಾಕಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.
ಮಡಿಕೇರಿ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2014 ಮಾರ್ಚ್ ತಿಂಗಳವರೆಗೆ ದೇಶದ ಸಾಲ ರೂ.53.11 ಲಕ್ಷ ಕೋಟಿ ಇತ್ತು. ಆದರೆ ಈಗ ಈ ಮೊತ್ತ ರೂ.173 ಲಕ್ಷ ಕೋಟಿಯಾಗಿದೆ. ರೂ.25 ಲಕ್ಷ ಕೋಟಿಯಷ್ಟು ಆರ್‍ಬಿಐ ಸಾಲ ಸೇರಿ ಕಳೆದ ಹತ್ತು ವರ್ಷಗಳಲ್ಲಿ ಸಾಲದ ಮೊತ್ತ ಒಟ್ಟು 258 ಲಕ್ಷ ಕೋಟಿಯಾಗಿದೆ ಎಂದರು.
ಕರ್ನಾಟಕ ರಾಜ್ಯ ತೆರಿಗೆ ವಸೂಲಿಯಲ್ಲಿ ಎರಡನೇ ಸ್ಥಾನದಲ್ಲಿದ್ದು, ವಾರ್ಷಿಕ ಕೇಂದ್ರಕ್ಕೆ 4 ಲಕ್ಷದ 81 ಸಾವಿರ ಕೋಟಿ ರೂ. ತೆರಿಗೆಯನ್ನು ಪಾವತಿಸುತ್ತಿದೆ. ನೀತಿ ಆಯೋಗದ ಪ್ರಕಾರ ಶೇ.40 ರಷ್ಟು ಹಣವನ್ನು ನಮ್ಮ ರಾಜ್ಯಕ್ಕೆ ನೀಡಬೇಕಿತ್ತು, ಆದರೆ ಕೇಂದ್ರ ಕೇವಲ ಶೇ.10 ರಷ್ಟು ನೀಡಿದೆ. ಕೇಂದ್ರದ ಬಿಜೆಪಿ ಸರ್ಕಾರ ನಿರಂತರವಾಗಿ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ ಎಂದು ಲಕ್ಷ್ಮಣ್ ಆರೋಪಿಸಿದರು.
ರಾಜ್ಯದ ರೈತರು ಹಾಗೂ ಜನರು ಬರದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರದ ಬರ ಅಧ್ಯಯನ ತಂಡ ರಾಜ್ಯದಲ್ಲಿ 35 ಸಾವಿರ ಕೋಟಿ ರೂ.ನಷ್ಟು ನಷ್ಟ ಸಂಭವಿಸಿದೆ ಎಂದು ವರದಿ ನೀಡಿದರು ಕೇಂದ್ರ ಇಲ್ಲಿಯವರೆಗೆ 35 ಪೈಸೆಯನ್ನು ಕೂಡ ಪರಿಹಾರವಾಗಿ ನೀಡಿಲ್ಲ. ಬಿಜೆಪಿ ರಾಜ್ಯದಲ್ಲಿ ಕೋಮು ಸಂಘರ್ಷಕ್ಕೆ ಮುಂದಾಗಿದ್ದು, ಕರಾವಳಿಯ ಕೋಮು ಪ್ರಯೋಗಾಲಯವನ್ನು ಮಂಡ್ಯದಲ್ಲಿ ಪ್ರಯೋಗಿಸಲು ಮುಂದಾಗಿದೆ. ಹಸಿರು ಶಾಲಿಗೆ ಹೆಸರುವಾಸಿಯಾಗಿದ್ದ ಮಂಡ್ಯದಲ್ಲಿ ಕೇಸರಿ ಶಾಲನ್ನು ಪ್ರಯೋಗಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಬಾರಿ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ 2 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುವುದು ನಿಶ್ಚಿತವಾಗಿದೆ ಎಂದು ಹೇಳಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಕೊಡಗು ಜಿಲ್ಲೆಗೆ ಘೋಷಿಸಿದ 350 ಕೋಟಿ ರೂ. ವೆಚ್ಚದ ಕಾಮಗಾರಿಗಳ ಬಗ್ಗೆ ಟೀಕೆ ಮಾಡುವ ಬದಲು ಬಹಿರಂಗ ಚರ್ಚೆಗೆ ಬರಲಿ ಎಂದು ಲಕ್ಷ್ಮಣ್ ಬಿಜೆಪಿಗರಿಗೆ ಆಹ್ವಾನ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ಕೆಪಿಸಿಸಿ ಸದಸ್ಯ ಬೇಕಲ್ ರಮಾನಾಥ್, ಸಾಮಾಜಿಕ ಜಾಲತಾಣದ ಅಧ್ಯಕ್ಷ ಸೂರಜ್ ಹೊಸೂರು ಹಾಗೂ ಮಾಧ್ಯಮ ಸಂಯೋಜಕ ಮಹೇಶ್ ಮೈಸೂರು ಉಪಸ್ಥಿತರಿದ್ದರು.
ಇದೇ ಸಂದರ್ಭ ಲಕ್ಷ್ಮಣ್ ಅವರು ಕೇಂದ್ರ ಸರ್ಕಾರದಿಂದ ಕಳೆದ 5ವರ್ಷಗಳಲ್ಲಿ ಕರ್ನಾಟಕ ರಾಜ್ಯಕ್ಕೆ ಆಗಿರುವ ಅನ್ಯಾಯಗಳು ಎಂಬ ಪತ್ರವನ್ನು ಬಿಡುಗಡೆ ಮಾಡಿದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*