ಬೆಂಗಳೂರು ಫೆ.1 NEWS DESK : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾಧಕರಿಗೆ, 2021 ರಿಂದ 2024ನೇ ಸಾಲಿನ ಜೀವಮಾನ ಸಾಧನೆಯ ವಿವಿಧ ಪ್ರಶಸ್ತಿಗಳನ್ನು ಸಿಎಂ ಸಿದ್ದರಾಮಯ್ಯ ಅವರು ಪ್ರದಾನ ಮಾಡಿ ಗೌರವಿಸಿದರು.
2020-21 ರಿಂದ 2023-24ನೇ ಸಾಲಿನ ಬಸವ ರಾಷ್ಟ್ರೀಯ ಪುರಸ್ಕಾರ, ಶ್ರೀ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ, ಪಂಪ ಪ್ರಶಸ್ತಿ, ಟಿ.ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿ, ಪಂಡಿತ್ ಪಂಚಾಕ್ಷರಿ ಗವಾಯಿ ಪ್ರಶಸ್ತಿ, ಸಂಗೊಳ್ಳಿ ರಾಯಣ್ಣ ಪ್ರಶಸ್ತಿ, ಅಕ್ಕಮಹಾದೇವಿ ಪ್ರಶಸ್ತಿ, ಕನಕಶ್ರೀ ಪ್ರಶಸ್ತಿ, ಶ್ರೀ ನಿಜಗುಣ ಪುರಂದರ ಪ್ರಶಸ್ತಿ, ಕುಮಾರವ್ಯಾಸ ಪ್ರಶಸ್ತಿ, ಶಾಂತಲಾನಾಟ್ಯ ರಾಣಿ ಪ್ರಶಸ್ತಿ, ಸಂತ ಶಿಶುನಾಳ ಷರೀಫ ಪ್ರಶಸ್ತಿ, ಪ್ರೊ.ಕೆ.ಜಿ.ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ, ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಬಿ.ವಿ.ಕಾರಂತ ಪ್ರಶಸ್ತಿ, ಡಾ.ಗುಬ್ಬಿ ವೀರಣ್ಣ ಪ್ರಶಸ್ತಿ, ಡಾ.ಸಿದ್ದಲಿಂಗಯ್ಯ ಸಾಹಿತ್ಯ ಪ್ರಶಸ್ತಿ, ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ, ಜಾನಪದಶ್ರೀ ಪ್ರಶಸ್ತಿ ಪುರಸ್ಕೃತರಾದ ಒಟ್ಟು 75 ಮಂದಿಗೆ ಮುಖ್ಯಮಂತ್ರಿಗಳು ಪ್ರಶಸ್ತಿ ನೀಡಿ ಗೌರವಿಸಿದರು.