ನಾಪೋಕ್ಲು ಫೆ.1 NEWS DESK : ಕೊಡಗು ಜಿಲ್ಲಾ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಭಾಗಮಂಡಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು, ಕುಂದಚೇರಿ ಭಾಗಮಂಡಲ ಅಯ್ಯಂಗೇರಿ ಗ್ರಾಮ ಪಂಚಾಯತ್ ಗಳ ಸಹಯೋಗದಲ್ಲಿ ಚೆಟ್ಟಿಮಾನಿಯಲ್ಲಿ ಯಶಸ್ವಿಯಾಗಿ ನಡೆದ ’”ಗ್ರಾಮ ಸಿರಿ” ಕಾರ್ಯಕ್ರಮದ ಅಂಗವಾಗಿ ಚೆಟ್ಟಿಮಾನಿಯ ಶಾದಿ ಮಹಲ್ ನಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು.
ಗ್ರಾಮ ಸಿರಿ ಆಚರಣಾ ಸಮಿತಿ ಅಧ್ಯಕ್ಷ ಪಾಣತಲೆ ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೋಳಿ ಬೈಲು ವೆಂಕಟೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕುಂದಚೇರಿ ಗ್ರಾ.ಪಂ ಅಧ್ಯಕ್ಷ ಪೊಡನೊಳನ ಬಿ.ದಿನೇಶ್ ಗ್ರಾಮ ಸಿರಿಯ ಲೆಕ್ಕಪತ್ರ ಮಂಡನೆ ಮಾಡಿದರು.
ಕುಯ್ಯಮುಡಿ ಮನೋಜ್ ಮಾತನಾಡಿ, ಕಾರ್ಯಕ್ರಮದಿಂದ ಉಳಿಕೆಯಾದ ಹಣವನ್ನು ಚೆಟ್ಟಿಮಾನಿ ಶಾಲಾ ಮೈದಾನದ ಅಭಿವೃದ್ಧಿಗೆ ಬಳಸಲಾಗುವುದು ಎಂದರು. ಸಭೆ ಸರ್ವಾನುಮತದಿಂದ ಅನುಮೋದಿಸಿತು.
ನಂತರ ಗ್ರಾಮಸಿರಿ ಕಾರ್ಯಕ್ರಮದ ಯಶಸ್ಸಿಗೆ ಕಾರಣಕರ್ತರಾದವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್, ಹೋಬಳಿ ಅಧ್ಯಕ್ಷ ಸುನಿಲ್ ಪತ್ರಾವೊ ಗ್ರಾಮ ಸಿರಿಯ ಯಶಸ್ವಿಗೆ ಕೈಜೋಡಿಸಿದ ಗ್ರಾಮಸ್ಥರು ಹಾಗೂ ಸಮಿತಿ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು.
ಎಲ್ಲಾ ಉಪಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸಿದ್ದರು. ಕುಂದಚೇರಿ ಗ್ರಾ.ಪಂ ಸದಸ್ಯ ಹ್ಯಾರಿಸ್ ಸ್ವಾಗತಿಸಿ, ವಂದಿಸಿದರು.
ವರದಿ : ದುಗ್ಗಳ ಸದಾನಂದ.