ಮಡಿಕೇರಿ ಫೆ.1 : ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು ಎಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹೇಳಿದಂತೆ ಇತಿಹಾಸವನ್ನು ಸೃಷ್ಟಿಸಬೇಕಾದರೆ ಡಾ.ಬಿ.ಆರ್ ಅಂಬೇಡ್ಕರ್ ಅವರ ಚಿಂತನೆ ಮತ್ತು ತತ್ವಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ನಿವೃತ್ತ ಶಿಕ್ಷಕ ಹಾಗೂ ದಲಿತ ಚಳುವಳಿಯ ಹೋರಾಟಗಾರ ಜಯಪ್ಪ ಹಾನಗಲ್ ಅಭಿಪ್ರಾಯ ವ್ಯಕ್ತಪಡಿಸಿದರು.
ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಸಮಿತಿ ವತಿಯಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ 50ನೇ ಸುವರ್ಣ ಸಂಭ್ರಮೋತ್ಸವ ಹಾಗೂ ಸಂವಿಧಾನ ದಿನಾಚರಣೆಯನ್ನು ಉದ್ಘಾಟಿಸಿ, ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ಪ್ರೊ. ಬಿ. ಕೃಷ್ಣಪ್ಪ ಅವರ ಒಡನಾಡಿಗಳಾಗಿ 50 ವರ್ಷಗಳ ಕರ್ನಾಟಕ ದಲಿತ ಸಂಘಟನೆಯ ಇತಿಹಾಸವನ್ನು ವಿವರಿಸಿದ ಅವರು, ಜಾತಿ ಪ್ರತಿಷ್ಠೆಗಳಿಲ್ಲದ ಅಸ್ಪೃಶ್ಯತೆಯ ತೊಡಕುಗಳಿಲ್ಲದ ಸಮತ ಭಾವದ ದೇಶವನ್ನು ಕಟ್ಟಬೇಕು. ಕೆಳವರ್ಗದವರಲ್ಲಿ ಮಾನವೀಯ ಘನತೆಯ ಸ್ವಾಭಿಮಾನವನ್ನು ಚಿಗುರಿಸುವುದು ಅಂಬೇಡ್ಕ ಅವರ ಬದುಕಿನ ಧ್ಯೆಯವಾಗಿತ್ತು. ದಲಿತ ಜನಾಂಗದ ಬದುಕಿನ ಇತಿಹಾಸದಲ್ಲಿ ಅಸ್ಪಶ್ಯತೆಯನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಿ ಅದನ್ನು ಕೊನೆಗೊಳಿಸಬೇಕು ಎಂಬ ಹೋರಾಟಕ್ಕೆ ಇಳಿದ ಮೊಟ್ಟ ಮೊದಲ ವ್ಯಕ್ತಿ ಡಾ.ಬಿ.ಆರ್.ಅಂಬೇಡ್ಕರ್. ಅಸಮಾನತೆ ಮೇಲು ಕೀಳು ಮಾನವ ನಿರ್ಮಿತವಲ್ಲ. ಅದರಿಂದ ದಲಿತರಿಗೆ ಶಿಕ್ಷಣ ಕೊಡುವುದರ ಮೂಲಕ ಅವರನ್ನು ಮುಖ್ಯ ವಾಹಿನಿಗೆ ತರಬೇಕು. ಅವರನ್ನು ಸಬಲರನ್ನಾಗಿ ಮಾಡಿದರೆ ಅವರು ಹಿಂದುಳಿಯಲು ಸಾಧ್ಯವಿಲ್ಲ ಎಂದು ಹೇಳಿದರು.
ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಮಾತನಾಡಿದ ವಕೀಲರು ಹಾಗೂ ಚಿಂತಕ ಕಾಳಿಸ್ವಾಮಿ ಸಂವಿಧಾನದ ಬಗ್ಗೆ ಪ್ರಮುಖ ಮಾಹಿತಿಗಳನ್ನು ಅರ್ಥ ಮಾಡಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ಅವರು ಭಾರತಕ್ಕೊಂದು ಸುಭದ್ರ ಸಂವಿಧಾನ ನೀಡಿದ್ದು, ನಾವೆಲ್ಲರೂ ಸಂವಿಧಾನದ ಅಡಿಯಲ್ಲಿ ಬದುಕುತ್ತಿರುವುದು ಅವರ ಕೊಡುಗೆಯಾಗಿದೆ ಎಂದರು.
ಸಮಾಜಕ್ಕೆ ವಿದ್ಯಾವಂತರಾಗಿರಿ, ಸಂಘಟಿತರಾಗಿ ಮತ್ತು ಉತ್ತೇಜಿತರಾಗಿರಿ ಎಂಬ ಸಲಹೆಗಳ ಮೂಲಕ ಜೀವನ ದೀರ್ಘವಾಗಿರುವುದಕ್ಕಿಂತ ಉತ್ತಮವಾಗಿರಬೇಕು ಎಂಬ ಅನೇಕ ವಿಚಾರಗಳನ್ನು ದೇಶಕ್ಕಾಗಿ ನೀಡಿದರು. ಮಹಿಳಾ ಹಕ್ಕುಗಳನ್ನು ನೀಡಿದ ಮಹಾನ್ ವಿದ್ವಾಂಸರು ಎಂದು ಬಣ್ಣಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ, ಡಾ. ಬಿ.ಆರ್ ಅಂಬೇಡ್ಕರ್ ಪುಸ್ತಕಗಳ ಅಧ್ಯಯನದ ಮೂಲಕ ಅವರರ ವಿಚಾರಧಾರೆಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು.
ಅಂಬೇಡ್ಕರ್ ಅವರ ಸೈದ್ಧಾಂತಿಕ ನೆಲೆಗಟ್ಟಿನಲ್ಲಿ ಚಳವಳಿಗಳನ್ನು ಆರಂಭಿಸಿದ ಪ್ರೊ. ಬಿ.ಕೃಷ್ಣಪ್ಪ ದಲಿತರಿಗಾಗಿ ಹಲವಾರು ಕಾಯ್ದೆಗಳನ್ನು ಜಾರಿಗೆ ತರುವಲ್ಲಿ ಶ್ರಮವಹಿಸಿದ್ದರು. ದೇವದಾಸಿ ಪದ್ಧತಿ, ಜೀತ ಪದ್ಧತಿ, ಜಾತಿ ಪದ್ಧತಿಗಳನ್ನು ನಿರ್ಮೂಲನೆ ಮಾಡಲು ದಲಿತ ಸಂಘಟನೆಯನ್ನು ಸ್ಥಾಪಿಸಿ, ಹೋರಾಟಗಳ ಮೂಲಕ ದಲಿತರನ್ನು ಜಾಗೃತಿ ಮೂಡಿಸಿದ ಹೆಗ್ಗಳಿಕೆ ಅವರಿಗೆ ಸಲ್ಲುತ್ತದೆ. ಪ್ರೊಫೆಸರ್ ಹುದ್ದೆಯಲ್ಲಿ ಇದ್ದುಕೊಂಡೆ ಹೊರಟಗಳನ್ನು ಮಾಡುತ್ತಾ ಹೆಸರಾದವರು, ಇವರ ಸಿದ್ಧಾಂತಗಳನ್ನು ಅನುಸರಿಸಲು ಕರೆ ನೀಡಿದರು.
ಜಿಲ್ಲಾ ಸಂಘಟನಾ ಸಂಚಾಲಕ ಬಾವಾ ಮಾಲ್ದಾರೆ ಮಾತನಾಡಿ, ಭಾರತದ ಸಂವಿಧಾನ ಪೀಠಿಕೆಯನ್ನು ಓದಿ ಅರ್ಥೈಸಿದರು.
ಇದೇ ಸಂದರ್ಭ ದಲಿತ ಚಳುವಳಿಯ ಹೋರಾಟಗಾರ ಹಾಗೂ ನಿವೃತ್ತ ಶಿಕ್ಷಕ ಜಯಪ್ಪ ಹಾನಗಲ್ ಹಾಗೂ ವಕೀಲರು ಹಾಗೂ ಚಿಂತಕ ಕಾಳಿಸ್ವಾಮಿ ಅವರನ್ನು ಜಿಲ್ಲಾ ಸಮಿತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.
ಕಾರ್ಯಕ್ರಮವನ್ನು ಜಿಲ್ಲಾ ಖಜಾಂಚಿ ರಾಮಚಂದ್ರ ಸ್ವಾಗತಿಸಿ, ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮತ್ತು ತಾಲೂಕು ಸಮಿತಿ ಪುನರ್ ರಚನೆ ಮಾಡಲಾಯಿತು.
ಜಿಲ್ಲಾ ಸಂಘಟನಾ ಸಂಚಾಲಕರುಗಳಾಗಿ ಬಸವಣ್ಣ ವಚನಕಾರರಾದ ಕರಿಯಯ್ಯ ಬ್ಯಾಡಗೊಟ್ಟ, ಬಾವಾ ಮಾಲ್ದಾರೆ, ಎಂ.ಚಿರಂಜೀವಿ ಕುಶಾಲನಗರ, ಬೋಜ ವಿರಾಜಪೇಟೆ, ಅಯ್ಯಪ್ಪ ಪೊನ್ನಂಪೇಟೆ, ಮನೋಜ್ ಕುಮಾರ್, ಜಿಲ್ಲಾ ಸಮಿತಿ ಸದಸ್ಯರಾಗಿ ಕುಳಿಯ ವಿರಾಜಪೇಟೆ, ಮಡಿಕೇರಿ ತಾಲೂಕು ಸಮಿತಿ ಸಂಚಾಲಕಿ ಗೌರಮ್ಮ ಅವರನ್ನು ನೇಮಕ ಮಾಡಲಾಯಿತು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*