ಚಾಮರಾಜನಗರ ಫೆ.1 NEWS DESK : ಗುಂಡ್ಲುಪೇಟೆ ವ್ಯಾಪ್ತಿಯ ಬಂಡೀಪುರ ಅಭಯಾರಣ್ಯದ ಮದ್ದೂರು ವಲಯ ಸೀಗನಬೆಟ್ಟದ ಬಳಿ ಗಂಡು ಹುಲಿಯೊಂದು ಮೃತಪಟ್ಟಿದೆ.
ಸುಮಾರು 5 ವರ್ಷದ ಹುಲಿ ಮತ್ತೊಂದು ಹುಲಿಯೊಂದಿಗೆ ಕಾದಾಡಿ ಸಾವನ್ನಪ್ಪಿರಬಹುದೆಂದು ತಿಳಿದು ಬಂದಿದೆ. ಅಲ್ಲದೆ ಮರಣೋತ್ತರ ಪರೀಕ್ಷೆಯ ಸಂದರ್ಭ ಹುಲಿಯ ಹೊಟ್ಟೆಯಲ್ಲಿ ಮುಳ್ಳು ಹಂದಿಯ ಮುಳ್ಳುಗಳು ಇರುವುದು ಕಂಡು ಬಂದಿದೆ.
ಬಂಡೀಪುರ ಸಂರಕ್ಷಣಾಧಿಕಾರಿ ಡಾ.ಪಿ.ರಮೇಶ್ ಕುಮಾರ್, ಗುಂಡ್ಲುಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ರವೀಂದ್ರ ಹಾಗೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.













