ಮಡಿಕೇರಿ ಫೆ.2 NEWS DESK : ಗೂನಡ್ಕ ತೆಕ್ಕಿಲ್ ಮಾದರಿ ಆಂಗ್ಲ ಮಾಧ್ಯಮ ಶಾಲೆ ವತಿಯಿಂದ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಅಬ್ದುಲ್ ಅಜಿಮ್ ಅವರನ್ನು ಸನ್ಮಾನಿಸಲಾಯಿತು.
ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್ ಮೈಸೂರು ಪೇಟ ತೊಡಿಸಿ, ಶಾಲು ಮತ್ತು ಸ್ಮರಣಿಕೆ, ತೆಕ್ಕಿಲ್ ದಶದೀವಿಕೆ ಹಾಗೂ ಬೆಳಕಿನೆಡೆಗೆ 10 ಮುಸ್ಲಿಂ ಕತೆಗಳ ಪುಸ್ತಕ ನೀಡಿ ಸನ್ಮಾನಿಸಿ ಗೌರವಿಸಿದರು.
ಗೂನಡ್ಕ ತೆಕ್ಕಿಲ್ ಮಾದರಿ ಆಂಗ್ಲ ಮಾಧ್ಯಮ ಶಾಲೆ ಸತತವಾಗಿ 5ನೇ ಬಾರಿ ಶೇ.100ರಷ್ಟು ಫಲಿತಾಂಶ ಪಡೆದಿರುವುದಕ್ಕೆ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಅಬ್ದುಲ್ ಅಜಿಮ್ ಸಂತಸ ವ್ಯಕ್ತಪಡಿಸಿದರು.
ಗ್ರಾಮೀಣ ಭಾಗದ ಇಂತಹ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಅವಿರತವಾಗಿ ಶ್ರಮಿಸುತ್ತಿರುವ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರನ್ನು ಮತ್ತು ಶಿಕ್ಷಕ ವೃಂದದವರನ್ನು ಅಭಿನಂದಿಸಿದರು.
ಶಾಲಾ ಮುಖ್ಯೋಪಾಧ್ಯಾಯರಾದ ಜೆ.ಡಿ.ಸಂಪತ್ ಶಾಲೆಯ ಶಿಕ್ಷಕ ವೃಂದದವರನ್ನು ಪರಿಚಯಿಸಿದರು.
ಈ ಸಂದರ್ಭದಲ್ಲಿ ಸಂಪಾಜೆ ಗ್ರಾ.ಪಂ ಅಧ್ಯಕ್ಷ ಸುಮತಿ ಶಕ್ತಿವೇಲು, ಉಪಾಧ್ಯಕ್ಷ ಎಸ್.ಕೆ ಹನೀಫ್ ಗೂನಡ್ಕ ಮತ್ತು ಶಾಲೆಯ ಶಿಕ್ಷಕ ವೃಂದದವರಾದ ಸೌಮ್ಯ, ತಾಹಿರಾ, ಸುಭಾಷಿಣಿ, ಮೆಹೆಕ್ನಾಜ್, ಪರ್ಜಾನ, ಶೃತಿ, ತೌಸೀನಾ, ಆಯುಷತ್ ನೌಫಿಯ, ರುಬೀನಾ ಹಾಜರಿದ್ದರು.